ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ಮಹಾದೇಶ್ವರ ಕ್ಷೇತ್ರ. 
ಕೊಡಗು

ಕಟ್ಟೆಮಾಡುವಿನಲ್ಲಿ ಕಾರ್ತಿಕ ಮಾಸದ ದೀಪೋತ್ಸವ

ನ.16 ರಿಂದ ಡಿ.7ರವರೆಗೆ ಒಟ್ಟು ನಾಲ್ಕು ಕಾರ್ತಿಕ ಸೋಮವಾರ

ನಾಪೋಕ್ಲು: ಮರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ಮಹಾದೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ದೀಪೋತ್ಸವ ಕಾರ್ಯಕ್ರಮವು ನ.16 ರಿಂದ ಡಿ.7ರವರೆಗೆ ಒಟ್ಟು ನಾಲ್ಕು ಕಾರ್ತಿಕ ಸೋಮವಾರಗಳಂದು ವಿಜೃಂಭಣೆಯಿಂದ ನಡೆಯಲಿದೆ.

ನ.16, 23, 30 ಹಾಗೂ ಡಿಸೆಂಬರ್ 7 ರಂದು ಕಾರ್ತಿಕ ಸೋಮವಾರದ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಈ ವಿಶೇಷ ದಿನಗಳಲ್ಲಿ ಪ್ರತಿದಿನ ಸಂಜೆ 7 ಗಂಟೆಗೆ ದೀಪೋತ್ಸವ ಸಂಕಲ್ಪ, ಪೂಜೆ, ರುದ್ರಾಭಿಷೇಕ ಹಾಗೂ ಮೃತ್ಯುಂಜಯ ಪೂಜೆ ನೆರವೇರಲಿದೆ. ರಾತ್ರಿ 9 ಗಂಟೆಗೆ ಮಹಾಪೂಜೆ ಹಾಗೂ 9.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಕೆ.ಕೆ.ಶಶಿ ಜನಾರ್ದನ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.