ಕುಶಾಲನಗರ
ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ಬುಧವಾರ ನಡೆಯಿತು. ಸಭೆಯ ಆರಂಭದಲ್ಲಿ ಹಿಂದಿನ ಸಭೆಯ ಅನುಪಾಲನಾ ವರದಿ ಓದುವ ಮೂಲಕ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳ ಜತೆಯಲ್ಲಿ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮುಖರಾಗಿರುತ್ತಾರೆ ಎಂಬುದರ ಬಗ್ಗೆ ಚರ್ಚೆಗಳು ನಡೆದವು.
ಗೃಹಲಕ್ಷ್ಮಿ ಯೋಜನೆಗೆ ಸಂಬAಧಿಸಿದAತೆ ತಾಲೂಕು ಮಟ್ಟದ ಅಧಿಕಾರಿ ಸಭೆಗೆ ಬಾರದೆ ಇಲಾಖೆಯ ಮೇಲ್ವಿಚಾರಕಿಯನ್ನು ಸಭೆಗೆ ಕಳುಹಿಸಿದರೂ ಸಮಗ್ರವಾದ ಅನುಪಾಲನಾ ವರದಿಯನ್ನು ನೀಡಿದ ಬಗ್ಗೆ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚೆ ನಡೆದು ಸಂಬAಧಿಸಿದ ಇಲಾಖೆಯವರು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ವಿ.ಪಿ. ಶಶಿಧರ್ ಸೂಚಿಸಿದರು. ತಾಲೂಕು ವ್ಯಾಪ್ತಿಯ ಒಂದು ಅಂಗನವಾಡಿಗೆ ಅವಧಿ ಮೀರಿದ ಅಹಾರ ವಸ್ತುಗಳನ್ನು ವಿತರಣೆ ಮಾಡಿರುವ ಬಗ್ಗೆ ಹೆಚ್ಚು ಚರ್ಚೆಗಳು ನಡೆದು ಸಮರ್ಪಕವಾದ ಮಾಹಿತಿಯನ್ನು ನೀಡುವಂತೆ ಸಭೆಗೆ ಅಗಮಿಸಿದ್ದ ಇಲಾಖೆಯ ಮೇಲ್ವಿಚಾರಕಿಗೆ ಸೂಚನೆ ನೀಡಿದರು.
ಗೃಹ ಜ್ಯೋತಿ ಯೋಜನೆ ವಿಷಯಗಳ ಪ್ರಸ್ತಾವನೆಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಂಬAಧವಾಗಿ ನೂತನ ಸೆಸ್ಕ್ ಶಾಖಾ ಕಚೇರಿಯನ್ನು ಗ್ರಾಮಾಂತರ ಪ್ರದೇಶದಲ್ಲಿ ತೆರೆಯಲು ಸಂಬAಧಿಸಿದ ಇಲಾಖೆಯ ವ್ಯವಸ್ಥಾಪಕರಿಗೆ ಪತ್ರ ವ್ಯವಹಾರ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಈ ಸಂದರ್ಭ ಮಾತನಾಡಿದ ವಿ.ಪಿ. ಶಶಿಧರ್, ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಯುವ ನಿಧಿ ಯೋಜನೆ, ಅನ್ನ ಭಾಗ್ಯ ಯೋಜನೆಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜತೆಯಲ್ಲಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ಸಮಗ್ರವಾಗಿ ದೊರಕುವಂತೆ ಕರ್ತವ್ಯ ನಿರ್ವಹಿಸಬೇಕು. ಅಭಿವೃದ್ಧಿಗೆ ಪೂರಕವಾದ ಮಾಹಿತಿ ಸಂಗ್ರಹಿಸಿ, ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಕುಶಾಲನಗರ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಪ್ಪಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ಸದಸ್ಯ ಅಣ್ಣಯ್ಯ, ಮುಸ್ತಫಾ, ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣೇಗೌಡ, ಶ್ರೀನಿವಾಸ, ಅಬ್ದುಲ್ ರಜಾಕ್, ರಫೀಕ್ ಖಾನ್, ಮಲ್ಲಿಕಾರ್ಜುನ, ಫಿಲೋಮಿನಾ, ಸುಹಾದ್ ಆಶ್ರಫ್, ಅಹಾರ ಶಿರಸ್ತೇದಾರರಾದ ಸ್ವಾತಿ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಸಾವಿತ್ರಮ್ಮ, ಸೆಸ್ಕ್ ಅಧಿಕಾರಿ ಮಂಜುನಾಥ, ಸಾರಿಗೆ ಇಲಾಖೆ ಅಧಿಕಾರಿ ರಾಮಚಂದ್ರ, ದರ್ಶನ್, ಉದ್ಯೋಗ ವಿನಿಮಯ ಇಲಾಖೆ ಅಧಿಕಾರಿ ಮಂಜುನಾಥ ಮತ್ತಿತರರು ಇದ್ದರು.