ಮಡಿಕೇರಿ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿವಿಧ ಲೋಪದೋಷಗಳನ್ನು ಸರಿಪಡಿಸಬೇಕು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟ ಮತ್ತು ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸುವ ಸಂಬAಧ ಇಂಡಿಯಾ ಒಕ್ಕೂಟದ ಪ್ರಮುಖರ ಸಭೆ ಮಂಗಳವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಉಂಟಾಗಿರುವ ತಾಂತ್ರಿಕ ಹಾಗೂ ಕಾರ್ಯಾಚರಣೆಯ ನ್ಯೂನತೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯ ನಂತರ ಇಂಡಿಯಾ ಒಕ್ಕೂಟದ ನಿಯೋಗ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರಿಗೆ ಮನವಿ ಪತ್ರ ಸಲ್ಲಿಸಿತು.
ಇದಕ್ಕೂ ಮೊದಲು ನಡೆದ ಸಭೆಯಲ್ಲಿ ಚರ್ಚೆ ನಡೆಸಿದ ನಾಯಕರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಹಾಗೂ ಅರ್ಹ ಮತದಾರರಿಗೆ ತೊಂದರೆಯಾಗದAತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಪಟ್ಟಿಯಿಂದ ಅರ್ಹರ ಹೆಸರು ಕೈಬಿಟ್ಟು ಹೋಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದರು. ಮುಂಬರುವ ದಿನಗಳಲ್ಲಿ ಈ ವಿಚಾರವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ ಅಗತ್ಯ ಬಿದ್ದರೆ ನಿಯೋಗ ಮಟ್ಟದ ಹೋರಾಟ ರೂಪಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಡಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮದ್, ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮುಡಾ ಸದಸ್ಯ ಆರ್.ಪಿ. ಚಂದ್ರಶೇಖರ್, ಮಿನಾಜ್ ಪ್ರವೀಣ್, ಸಿಪಿಐ(ಎಂ) ಜಿಲ್ಲಾ ಅಧ್ಯಕ್ಷ ರಮೇಶ್, ಸಿಪಿಐ ಅಧ್ಯಕ್ಷ ರಮೇಶ್ ಮಾಯಮಡಿ ಮತ್ತಿತರರು ಇದ್ದರು.