ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧ ಇದುವರೆಗಿನ ಪ್ರಕ್ರಿಯೆ ಸಂಬAಧಿಸಿದAತೆ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಸಭೆ ನಡೆಸಿದರು. ತೆನ್ನಿರಾ ಮೈನಾ, ಸಜಿಲ್ ಕೃಷ್ಣ, ಶ್ರೀಧರ್ ಇದ್ದರು. 
ಕೊಡಗು

ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ

ಮಡಿಕೇರಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧ ಇದುವರೆಗಿನ ಪ್ರಕ್ರಿಯೆ ಸಂಬAಧಿಸಿದAತೆ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಮಂಗಳವಾರ ಸಭೆ ನಡೆಸಿದರು. ನಗರದ ತಹಸೀಲ್ದಾರರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧಿಸಿದAತೆ ಕರಡು ಮತದಾರರ ಪಟ್ಟಿ ಪ್ರಕಟ, ಜತೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಎಸ್‌ಐಆರ್ ಪ್ರಕ್ರಿಯೆ ಸಮಯದಲ್ಲಿ ಮ್ಯಾಪಿಂಗ್ ಆಗದಿರುವ ಹಿನ್ನೆಲೆ ಜಿಲ್ಲೆಯಲ್ಲಿ 58,883 ಮಂದಿಗೆ ನೋಟೀಸ್ ನೀಡಲಾಗಿತ್ತು, ಇದರಲ್ಲಿ ಸೆ.21ಕ್ಕೆ 36,243 ಮಂದಿ ಮಾಹಿತಿ ನೀಡಿ ಸರಿಪಡಿಸಲಾಗಿದೆ. ಉಳಿದಂತೆ 22,640 ಮಂದಿ ಮಾಹಿತಿ ನೀಡಲು ಬಾಕಿ ಇದ್ದು, ಪ್ರಕ್ರಿಯೆಗಳು ನಡೆಯುತ್ತಿವೆ.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧ ಮ್ಯಾಪಿಂಗ್ ಆಗದಿರುವ ಮತದಾರರಿಗೆ ನೋಟೀಸ್ ನೀಡಲಾಗಿದ್ದು, ಸಂಬAಧಪಟ್ಟ ಗ್ರಾಮ ಪಂಚಾಯತ್‌ಗೆ ತೆರಳಿ ಮಾಹಿತಿ ನೀಡಿ ಸರಿಪಡಿಸಿಕೊಳ್ಳುವಂತಾಗಬೇಕು. ಇಲ್ಲದಿದ್ದಲ್ಲಿ ಹೊಸದಾಗಿ ನಮೂನೆ-6 ನೀಡಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವAತಾಗಬೇಕು.

ಸಣ್ಣಪುಟ್ಟ ಸಮಸ್ಯೆಗಳು ಇದ್ದಲ್ಲಿ ಬಿಎಲ್‌ಒಗಳು, ಗ್ರಾಮ ಆಡಳಿತಾಧಿಕಾರಿ, ಗ್ರಾ.ಪಂ. ಪಿಡಿಒ, ಅಥವಾ ತಹಸೀಲ್ದಾರರಿಗೆ ಮಾಹಿತಿ ನೀಡಿದ್ದಲ್ಲಿ ಸರಿಪಡಿಸಲಾಗುವುದು. ಯಾವುದೇ ಕಾರಣಕ್ಕೂ ಗಾಬರಿಯಾಗುವ ಅಗತ್ಯವಿಲ್ಲ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಪ್ರಕ್ರಿಯೆನಿರಂತರವಾಗಿದ್ದು, 18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಪ್ರತಿನಿಧಿ ತೆನ್ನಿರಾ ಮೈನಾ, ನೋಟೀಸ್ ಪಡೆದಿರುವ ವಯಸ್ಸಾದವರು, ವಿಶೇಷ ಚೇತನರು ಇತರರಿಗೆ ಹೆಚ್ಚಿನ ಆದ್ಯತೆ ನೀಡಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಸರಿಪಡಿಸುವಂತಾಗಬೇಕು. ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ತೃಪ್ತಿಯುತವಾಗಿ ನಡೆಯುತ್ತಿದ್ದು, ಆರಂಭದಲ್ಲಿ ಒಂದು ರೀತಿ ಆತಂಕವಿತ್ತು. ಆದರೆ ಎಸ್‌ಐಆರ್ ಪ್ರಕ್ರಿಯೆ ಗಮನಿಸಿದಾಗ ಈ ಪ್ರಕ್ರಿಯೆ ಎಂದೋ ಆಗಬೇಕಿತ್ತು ಅನ್ನಿಸಿತು. ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಶೇ.100 ರಷ್ಟು ಯಶಸ್ವಿಯಾಗಿ ಪೂರ್ಣಗೊಳ್ಳಬೇಕು ಎಂಬುದು ರಾಜಕೀಯ ಪಕ್ಷಗಳ ಆಶಯವಾಗಿದೆ ಎಂದು ಹೇಳಿದರು.

ಭಾರತೀಯ ಜನತಾ ಪಕ್ಷದ ಸಜಿಲ್ ಕೃಷ್ಣ ಮಾತನಾಡಿ, ಭಾರತೀಯ ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ, ಯಾವುದೇ ರೀತಿ ಗೊಂದಲವಿಲ್ಲದೆ ನಡೆಸಿದೆ. ಇದಕ್ಕೆ ಮತದಾರರು ಸಹ ಉತ್ತಮ ಸ್ಪಂದನೆ ನೀಡಿದ್ದು, ಅರ್ಹ ಮತದಾರರು ಬಿಟ್ಟು ಹೋಗದಂತೆ ನೋಡಿಕೊಳ್ಳುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಉತ್ತಮವಾಗಿ ನಡೆಯುತ್ತಿದೆ ಎಂದರು.

ತಹಸೀಲ್ದಾರ್ ಶ್ರೀಧರ್ ಎಸ್‌ಐಆರ್ ಪ್ರಕ್ರಿಯೆ ಸಂಬAಧ ಹಲವು ಮಾಹಿತಿ ನೀಡಿದರು. ಚುನಾವಣಾ ಶಿರಸ್ತೆದಾರರಾದ ಚಂದ್ರಶೇಖರ್ ಇತರರು ಇದ್ದರು.