ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ ಕೈಗೊಂಡಿದ್ದ ವಿರಾಜಪೇಟೆ ಸೇಂಟ್ ಆನ್ಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು. 
ಕೊಡಗು

ಸೇಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಶ್ರಮದಾನ

ವಿರಾಜಪೇಟೆ: ಪಟ್ಟಣದ ಸೇಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಶುಕ್ರವಾರ ಸ್ವಚ್ಛತಾ ಶ್ರಮದಾನದೊಂದಿಗೆ ಗಾಂಧಿ ಜಯಂತಿ ಆಚರಿಸಲಾಯಿತು.

ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ಶ್ರಮದಾನ ಮಾಡಿ ಕಾಲೇಜಿನ ಒಳ ಆವರಣದಲ್ಲಿ ಸ್ವಚ್ಛಗೊಳಿಸಿದರು. ಪದವಿ ಕಾಲೇಜಿನ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ಅವರು ಮಾತನಾಡಿ, ವಿದ್ಯಾರ್ಥಿಗಳು ಗಾಂಧಿ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಎನ್‌ಎಸ್‌ಎಸ್ ಮಹಾತ್ಮ ಗಾಂಧಿ ಅವರ ಪರಿಕಲ್ಪನೆಯಾಗಿದ್ದು, ವಿದ್ಯಾರ್ಥಿಗಳು ಸದಾ ಸಮಾಜಕ್ಕೆ ಮಾದರಿಯಾಗಿ ಬದುಕಿ ಎಂದು ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿದರು. ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿಗಳಾದ ಬಿ.ಎನ್.ಶಾಂತಿಭೂಷಣ್, ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿ ನಾಯಕರಾದ ಮುತ್ತಪ್ಪ, ಲಿಪಿಕಾ, ಸಾಧ್ವಿಕಾ, ಅನನ್ಯಾ, ಲಿತಿನ್, ಆಪ್ತ ತಮ್ಮಯ್ಯ, ಬೋಪಣ್ಣ, ನೇಹಾ ಹಾಗೂ ಸ್ವಯಂ ಸೇವಾ ವಿದ್ಯಾರ್ಥಿಗಳು ಇದ್ದರು.