ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಹಾಗೂ ಸೈಬರ್ ವಂಚನೆಗಳಿAದ ಗ್ರಾಹಕರನ್ನು ರಕ್ಷಿಸುವ ಬಗ್ಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಡಿಕೇರಿ ಪ್ರಾದೇಶಿಕ ಕಚೇರಿ ವತಿಯಿಂದ ಮೇಕೇರಿ ಗ್ರಾಮದಲ್ಲಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು. ಸೈಬರ್ ವಂಚನೆ ಬಗ್ಗೆ ಅರಿವು ಮೂಡಿಸಲು ನಾಟಕ ಪ್ರದರ್ಶನ
ಕೊಡಗು

ಸೈಬರ್ ವಂಚನೆ ಬಗ್ಗೆ ಅರಿವು ಮೂಡಿಸಲು ನಾಟಕ ಪ್ರದರ್ಶನ

ಮಡಿಕೇರಿ

ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಹಾಗೂ ಸೈಬರ್ ವಂಚನೆಗಳಿAದ ಗ್ರಾಹಕರನ್ನು ರಕ್ಷಿಸುವ ಉದ್ದೇಶದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಡಿಕೇರಿ ಪ್ರಾದೇಶಿಕ ಕಚೇರಿ ವತಿಯಿಂದ ಸಮೀಪದ ಮೇಕೇರಿ ಗ್ರಾಮದ ಶಾಲಾವರಣದಲ್ಲಿ ಶುಕ್ರವಾರ ನಾಟಕದ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಾಟಕದ ಮೂಲಕ ಸಾರ್ವಜನಿಕರಿಗೆ ಸಾಮಾಜಿಕ ಭದ್ರತೆ, ಸುರಕ್ಷಿತ ಜೀವನ ಹಾಗೂ ಬ್ಯಾಂಕಿAಗ್ ವ್ಯವಹಾರಗಳಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಅರಿವು ಮೂಡಿಸಿದರು. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ), ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್‌ಬಿವೈ), ಅಟಲ್ ಪಿಂಚಣಿ ಯೋಜನೆ (ಎಪಿವೈ) ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಸೌಲಭ್ಯಗಳು ಹಾಗೂ ಭವಿಷ್ಯದ ಆರ್ಥಿಕ ಭದ್ರತೆಗೆ ಅವುಗಳ ಮಹತ್ವವನ್ನು ತಿಳಿಸಲಾಯಿತು.

ಇದೇ ವೇಳೆ ಸೈಬರ್ ವಂಚನೆಗಳ ಮೂಲಕ ಹಣ ಕಳೆದುಕೊಳ್ಳುವ ಪ್ರಕರಣಗಳು, ಅಪರಿಚಿತ ಲಿಂಕ್‌ಗಳನ್ನು ತೆರೆಯುವುದು, ಅನಧಿಕೃತ ಅಪ್ಲಿಕೇಶನ್‌ಗಳನ್ನು ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳುವುದು ಹಾಗೂ ಬ್ಯಾಂಕಿAಗ್ ಮಾಹಿತಿಯನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳುವುದರಿAದ ಉಂಟಾಗಬಹುದಾದ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಡಿಜಿಟಲ್ ವಹಿವಾಟು ನಡೆಸುವಾಗ ಎಚ್ಚರಿಕೆ ವಹಿಸುವುದು, ಒಟಿಪಿ ಹಾಗೂ ಬ್ಯಾಂಕ್ ಖಾತೆಯ ಗೌಪ್ಯ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳದಿರುವುದು ಸೇರಿದಂತೆ ಸುರಕ್ಷಿತ ಬ್ಯಾಂಕಿAಗ್ ಕ್ರಮಗಳನ್ನು ವಿವರಿಸಲಾಯಿತು.

ಪ್ರಾದೇಶಿಕ ವ್ಯವಸ್ಥಾಪಕ ಉದಯಕುಮಾರ್ ಈ ಸಂದರ್ಭ ಮಾತನಾಡಿ, ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಆರ್ಥಿಕ ಭದ್ರತೆ ಹಾಗೂ ಬ್ಯಾಂಕಿAಗ್ ವ್ಯವಹಾರಗಳ ಕುರಿತು ಸಮರ್ಪಕ ಅರಿವು ಅಗತ್ಯವಾಗಿದೆ. ಕೇಂದ್ರ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳು ಸಾಮಾನ್ಯ ಜನರಿಗೆ ವಿಮಾ ರಕ್ಷಣೆ ಮತ್ತು ಭವಿಷ್ಯದ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶ ಹೊಂದಿವೆ. ಅರ್ಹ ಗ್ರಾಹಕರು ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು. ಅನಿರೀಕ್ಷಿತ ಸಂದರ್ಭಗಳಲ್ಲಿ ವಿಮಾ ಯೋಜನೆಗಳು ಕುಟುಂಬಗಳಿಗೆ ಆರ್ಥಿಕ ನೆರವಾಗಬಲ್ಲವು ಎಂದರು.

ಸೈಬರ್ ವಂಚನೆಗಳ ಕುರಿತು ಮಾತನಾಡಿದ ಅವರು, ತಂತ್ರಜ್ಞಾನದ ಬಳಕೆ ಹೆಚ್ಚಾದಂತೆ ಆನ್‌ಲೈನ್ ವಂಚನೆಗಳ ಬಗ್ಗೆಯೂ ಎಚ್ಚರಿಕೆ ಅಗತ್ಯವಾಗಿದೆ. ಅಪರಿಚಿತ ವ್ಯಕ್ತಿಗಳಿಂದ ಬರುವ ಕರೆಗಳು, ಸಂದೇಶಗಳು ಹಾಗೂ ಲಿಂಕ್‌ಗಳಿಗೆ ಪ್ರತಿಕ್ರಿಯಿಸುವಾಗ ಜಾಗರೂಕರಾಗಿರಬೇಕು. ಬ್ಯಾಂಕ್ ಅಧಿಕಾರಿಗಳೆಂದು ಹೇಳಿಕೊಂಡು ಕರೆ ಮಾಡುವವರಿಗೆ ಒಟಿಪಿ, ಪಿನ್ ಅಥವಾ ಖಾತೆಯ ಗೌಪ್ಯ ಮಾಹಿತಿಯನ್ನು ನೀಡಬಾರದು. ಅನುಮಾನಾಸ್ಪದ ವಹಿವಾಟು ಕಂಡುಬAದಲ್ಲಿ ತಕ್ಷಣ ಬ್ಯಾಂಕಿನ ಗಮನಕ್ಕೆ ತರಬೇಕು. ಸಾರ್ವಜನಿಕರಲ್ಲಿ ಇಂತಹ ವಿಚಾರಗಳ ಕುರಿತು ಜಾಗೃತಿ ಮೂಡಿಸುವಲ್ಲಿ ನಾಟಕದಂತಹ ಸರಳ ಮತ್ತು ಪರಿಣಾಮಕಾರಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ, ಗ್ರಾಮಸ್ಥರು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.