ಮಡಿಕೇರಿ: ಭಾರತ-ಪಾಕಿಸ್ತಾನ ಯುದ್ಧದಲ್ಲಿ (೧೯೬೫) ವೀರ ಮರಣವನ್ನಪ್ಪಿದ ಮಹಾವೀರ ಚಕ್ರ ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಪುಣ್ಯಸ್ಮರಣೆ ಸೆ.೭ ರಂದು ಮಡಿಕೇರಿಯಲ್ಲಿ ಆಯೋಜಿಸಲಾಗಿದೆ.
ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಕುಟುಂಬಸ್ಥರ ಸಹಯೋಗದಲ್ಲಿ ಅಂದು ಬೆಳಗ್ಗೆ ೧೧ ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ. ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆ ಆಚರಿಸಲಾಗುವುದೆಂದು ಕೊಡವ ಮಕ್ಕಡ ಕೂಟ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿವೃತ್ತ ಸೇನಾಧಿಕಾರಿ ಏರ್ ಮಾರ್ಷಲ್ ಕೊಡಂದೇರ ನಂದ ಕಾರ್ಯಪ್ಪ (ನಿ), ಮಡಿಕೇರಿ ಶಾಸಕ, ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಎಂಎಲ್ಸಿ ಸುಜಾ ಕುಶಾಲಪ್ಪ, ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ, ಡಿಸಿ ಡಾ.ಬಿ.ಸಿ. ಸತೀಶ, ಎಸ್ಪಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ಕರ್ನಲ್ ಕಟ್ರತಂಡ ಸುಬ್ಬಯ್ಯ (ನಿ), ಸಂಚಾಲಕ ಮೇಜರ್ ಬಿದ್ದಂಡ ನಂಜಪ್ಪ (ನಿ), ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಶಾಖೆ ಅಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ, ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಅಜ್ಜಮಾಡ ಕುಟುಂಬ ಅಧ್ಯಕ್ಷ ಲವ ಕುಶಾಲಪ್ಪ, ಉಪಾಧ್ಯಕ್ಷ ಕಟ್ಟಿ ಮಂದಯ್ಯ, ಕಾರ್ಯದರ್ಶಿ ಅಜ್ಜಮಾಡ ಜಿ.ಬೋಪಯ್ಯ, ಖಜಾಂಚಿ ಅಜ್ಜಮಾಡ ಟಿ.ಚಂಗಪ್ಪ, ಕೊಡವ ಮಕ್ಕಡ ಕೂಟ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮತ್ತಿತರರು ಪಾಲ್ಗೊಳ್ಳಲಿ ದ್ದಾರೆ.
ಬಹುಮಾನ ವಿತರಣೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕೊಡವ ಮಕ್ಕಡ ಕೂಟದಿಂದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಕುರಿತು ಏರ್ಪಡಿಸಲಾದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ.