ಜಿಲ್ಲೆ

ಕಾಂಗ್ರೆಸ್ ತೆಕ್ಕೆಗೆ ಕೋಡಿಂಬಾಡಿ ಗ್ರಾಮ ಪಂಚಾಯಿತಿ

Mangaluru - Nishantha Narayana

ಪುತ್ತೂರು: ಬಿಜೆಪಿಯ ತೆಕ್ಕೆಯಲ್ಲಿದ್ದ ಕೋಡಿಂಬಾಡಿ ಪಂಚಾಯಿತಿಯನ್ನು ಕಾಂಗ್ರೆಸ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಕೋಡಿಂಬಾಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಲ್ಲಿಕಾ ಅಶೋಕ್, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಆಯ್ಕೆಯಾಗಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 11 ಮಂದಿ ಸದಸ್ಯ ಬಲವನ್ನು ಹೊಂದಿದ್ದು, 6 ಬಿಜೆಪಿ ಮತ್ತು 5 ಕಾಂಗ್ರೆಸ್ ಬೆಂಬಲಿತರು ಜಯವನ್ನು ಗಳಿಸಿದ್ದರು. ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯೋರ್ವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರ ಮತ ಚಲಾವಣೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಬಂದಿದೆ.