ಕಡಬ: ಕೊಡಿಂಬಾಳ ಗ್ರಾಮದ ಮಾಲೇಶ್ವರ ಶ್ರೀ ಮಹಾಬಲೇಶ್ವರ ಸ್ವಾಮಿ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ 15 ವರ್ಷದ ವರ್ಧಂತಿ ಮಹೋತ್ಸವ ಪ್ರಯುಕ್ತ ಗೊನೆ ಮುಹೂರ್ತ ಶುಕ್ರವಾರ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ವೈದಿಕ ವಿಧಿವಿಧಾನ ನೆರವೇರಿಸಿದರು. ಅರ್ಚಕ ಸಿದ್ದಯ್ಯ ಹಿರೆಮಠ್ ಸಹಕರಿಸಿದರು. ದೇವಸ್ಥಾನದ ಆಡಳಿತ ಸಮಿತಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪಿ.ವಿಶ್ವೇಶ್ವರ ಭಟ್, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಆಶೋಕ್ ಆಲ್ವ ಬೆದ್ರಾಜೆ, ವಿವಿಧ ಸಮಿತಿ ಪದಾಧಿಕಾರಿಗಳು ಮೊದಲಾದವರು ಇದ್ದರು. ದೇವಸ್ಥಾನದ ವರ್ಧಂತಿ ಮಹೋತ್ಸವವು ಮಾ.21ಮತ್ತು 22ರಂದು ನಡೆಯಲಿದೆ.