ಜಿಲ್ಲೆ

ಮಾ.1ರಂದು ಕೊಳಚಿಕಂಬಳ ಕ್ಲಬ್ ವಾರ್ಷಿಕೋತ್ಸವ

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರಕ್ಕೆ ಸಂಬಂಧಿತ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ಸೇವಾ ಸಮಿತಿಯ ಅಂಗ ಸಂಸ್ಥೆ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 16ನೇ ವಾರ್ಷಿಕೋತ್ಸವ ಹಾಗೂ ಮಹಾ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ಮಾರ್ಚ್ 1ರಂದು ಕೊಳಚಿಕಂಬಳದ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ವಠಾರದಲ್ಲಿ ಜರುಗಲಿದೆ. ಬೆಳಗ್ಗೆ 10ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ವಿದ್ಯಾನಿಧಿ ವಿತರಣೆ, ಪ್ರತಿಭಾ ಪುರಸ್ಕಾರ ನಡೆಯಲಿದ್ದು, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ, ‘ಪೊರಿಪುದಪ್ಪೆ ಜಲದುರ್ಗೆ’ ತುಳು ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.