ಬಂಗಾರಪೇಟೆಯಲ್ಲಿ ನಡೆದ ಬಾಲಕಿ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯಲ್ಲಿ ೆ ಮಾಜಿ ಸಂಸದ ಎಸ್.ಮುನಿಸ್ವಾಮಿ ಮಾತನಾಡಿದರು.
- ಬಾಲಕಿ ಮೇಲೆ ಅತ್ಯಾಚಾರ ಯತ್ನ ಮತ್ತೊಬ್ಬನ ಬಂಧನ
ಬಾಲಕಿ ಮೇಲೆ ಅತ್ಯಾಚಾರ ಯತ್ನ ಮತ್ತೊಬ್ಬನ ಬಂಧನ
ಬಂಗಾರಪೇಟೆ: ಆರು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಇಬ್ಬರ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಶನಿವಾರ ರಾತ್ರಿ ನೂರಾರು ನಾಗರಿಕರು ಪೊಲೀಸ್ ಠಾಣೆ ಸುತ್ತುವರಿದ ಹಿನ್ನೆಲೆಯಲ್ಲಿ ಕೆಲ ಕಾಲ ಉದ್ವಿಗ್ನ ಎದುರಾಗಿದ್ದು, ಆರೋಪಿಗಳ ಬಂಧನಕ್ಕೆ ಪಟ್ಟು ಹಿಡಿದ ನಂತರ ರಾತ್ರಿಯೇ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರಿಂದ ಪ್ರತಿಭಟನೆ ಹಿಂಪಡೆದರು.
ಪೋಕ್ಸೋ ಪ್ರಕರಣದಡಿ ಈಗಾಗಲೇ ರಾಘವೇಂದ್ರ(37) ಎಂಬಾತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶನಿವಾರ ಯೋಗೇಶ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಅಪ್ರಾಪ್ತೆ ತಾಯಿ ನೀಡಿದ ದೂರಿನ ಆಧಾರದ ಮೇಲೆ ಮೂವರು ಆರೋಪಿಗಳು ಇರುವುದಾಗಿ ಆರೋಪಿಸಲಾಗಿತ್ತು. ಮತ್ತೊಬ್ಬನ ವಿರುದ್ಧವೂ ಕ್ರಮಕ್ಕೆ ತನಿಖೆ ಮುಂದುವರೆದಿದೆ.
ರಾತ್ರಿಯೇ ಸ್ಥಳಕ್ಕೆ ಆಗಮಿಸಿದ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಪ್ರತಿಭಟನಾಕಾರರಿಂದ ದೂರು ಸ್ವೀಕರಿಸಿ, ದೂರಿನ ಆಧಾರದ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಮತ್ತೊಬ್ಬ ಆರೋಪಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಪ್ರತಿಭಟನಾಕಾರರು ಪ್ರತಿಭಟನೆ ವಾಪಸ್ ಪಡೆದರು.
ಹೆಣ್ಣು ಮಕ್ಕಳ ವಿಷಯದಲ್ಲಿ ರಾಜಕೀಯ ಬೇಡ: ಬಂಗಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಹಾವಳಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದರಿಂದ ಅಹಿತಕರ ಘಟನೆಗಳು ಹೆಚ್ಚಾಗುತ್ತಿವೆ. ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬಾಲಕಿ ಮೇಲೆ ನಡೆದ ಅತ್ಯಾಚಾರ ಯತ್ನ ಪ್ರಕರಣ ಅತ್ಯಂತ ಗಂಭೀರವಾದುದು, ಪ್ರಕರಣದ ಆರೋಪಿಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಆರೋಪ ಸಾಬೀತಾದಲ್ಲಿ ಅವರಿಗೆ ನೀಡುವ ಶಿಕ್ಷೆ ರಾಜ್ಯದಲ್ಲೇ ಮಾದರಿಯಾಗುವಂತಿರಬೇಕು ಎಂದರು.
ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡುವುದು ಬೇರೆ ವಿಚಾರ, ಆದರೆ ಹೆಣ್ಣು ಮಕ್ಕಳಿಗೆ ಅನ್ಯಾಯವಾದಾಗ ಪಕ್ಷಭೇದ ಮರೆತು ನ್ಯಾಯಕ್ಕಾಗಿ ಒಗ್ಗಟ್ಟಾಗಿ ನಿಲ್ಲುವುದು ಪ್ರತಿಯೊಬ್ಬರ ಜವಾಬ್ದಾರಿ. ಈ ಸೂಕ್ಷ$್ಮ ಪ್ರಕರಣ ರಾಜಕೀಯಗೊಳಿಸದೆ, ಸತ್ಯಾಸತ್ಯತೆ ಹೊರಬರುವಂತೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಬಾಲಕಿಯರ ಸುರಕ್ಷತೆ ಸಮಾಜದ ಸಾಮೂಹಿಕ ಹೊಣೆಗಾರಿಕೆಯಾಗಿದೆ. ಶಾಲೆ, ಮನೆ, ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು, ಪಾಲಕರು, ಜನಪ್ರತಿನಿಧಿಗಳು, ಸಾರ್ವಜನಿಕರು ಒಟ್ಟಾಗಿ ಕಾರ್ಯನಿರ್ವಹಿಸಬೇಕಿದೆ ಎಂದರು.
ಅಶಾಂತಿಗೆ ಯತ್ನಿಸಿದರೆ ಕಠಿಣ ಕ್ರಮ: ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯಿಂದ ಭಾನುವಾರ ಸಂಜೆ ರೂಟ್ ಮಾರ್ಚ್ ನಡೆಸಲಾಯಿತು. ಕೆಜಿಎ್ ಪೊಲೀಸ್ ಜಿಲ್ಲಾ ಎಸ್ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು.
ಎಸ್ಪಿ ಶಿವಾಂಶು ರಜಪೂತ್ ಮಾತನಾಡಿ, ಯಾರೂ ಅಶಾಂತಿಗೆ ಯತ್ನಿಸಬಾರದು. ಪ್ರತಿಭಟನೆ ನಡೆಸಲು ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹೊರಗಿನಿಂದ ಕೆಲವರು ಬಂದು ಬಂಗಾರಪೇಟೆಯಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಇಂತಹ ಟನೆ ನಡೆಯದಂತೆ ಎಲ್ಲರೂ ಶಾಂತಿ ಹಾಗೂ ಸಾಮರಸ್ಯ ಕಾಪಾಡಬೇಕು. ಎಲ್ಲರೂ ಪ್ರೀತಿಯಿಂದ ಸಹಬಾಳ್ವೆ ನಡೆಸಬೇಕು ಎಂದರು.
ಆಸ್ಪತ್ರೆ ವೃತ್ತ, ಕೋಲಾರ ಮುಖ್ಯ ರಸ್ತೆ, ಬೋವಿನಗರ, ಗಂಗಮ್ಮನಪಾಳ್ಯ, ಸೇಟ್ ಕಾಂಪೌಂಡ್ ಹಾಗೂ ಸಿ. ರಹೀಂ ನಗರ ಸೇರಿವಿವಿಧ ಬಡಾವಣೆಗಳಲ್ಲಿ ರೂಟ್ಮಾರ್ಚ್ ನಡೆಯಿತು.