ಕೋಲಾರ ನಗರದ ಲೋಕಾಯುಕ್ತ ಪೊಲೀಸರಿಗೆ ಸಚಿವ ಕೃಷ್ಣಬೈರೇಗೌಡ ಅವರ ವಿರುದ್ಧ ದೂರು ನೀಡಿದ ನಂತರ, ಸುದ್ದಿಗಾರರೊಂದಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿದರು. 
ಕೋಲಾರ

ಕೃಷ್ಣಬೈರೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕೋಲಾರ: ತಾಲೂಕಿನ ಗರುಡನಪಾಳ್ಯದಲ್ಲಿ ಸಚಿವ ಕೃಷ್ಣಬೈರೇಗೌಡ ಅವರು ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ, ಲೋಕಾಯುಕ್ತ ಡಿವೈಎಸ್ಪಿ ವೆಂಕಟೇಶ್​ ಅವರಿಗೆ ಬಿಜೆಪಿ ಮುಖಂಡರು ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ಸ್ವಚ್ಚ, ಭ್ರಷ್ಟಚಾರ ರಹಿತ ಸಚಿವ ಎನಿಸಿಕೊಂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದಕ್ಕೆ ದಾಖಲೆಗಳು ಇವೆ. ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು.
ಗರುಡನಪಾಳ್ಯದಲ್ಲಿ ಖರಾಬು ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಸವೇ ನಂಬರ್​ 46, 47ರ ಪೈಕಿ 21 ಎಕರೆ ಜಮೀನು ಕಬಳಿಸಿಕೊಂಡಿದ್ದಾರೆ. ಈ ಬಗ್ಗೆ ನಮ್ಮ ಪಕ್ಷದ ನಾಯಕರು ದಾಖಲೆ ಸಮೃತ ಬಿಡುಗಡೆ ಮಾಡಿದ್ದಾರೆ. ಈ ಸಂಬಂಧ ತನಿಖೆ ನಡೆಸಲು ತಹಲ್ದಾರ್​ ಕಚೇರಿ ಕಾವಲು ಕಾತು ಎಸಿ ಅವರಿಗೆ ಮನವಿ ಸಲ್ಲಿಸಿದ್ದರು ಯಾವುದೇ ರೀತಿ ಪ್ರಯೋಜನವಾಗಿಲ್ಲ. ಅದ್ದರಿಂದ ಲೋಕಾಯುಕ್ತರಿಗೆ ದೂರು ನೀಡಲಾಗಿದೆ ಎಂದರು.
ಈ ಸಂಬಂಧ ಈಗಾಗಲೇ 2025ರ ಡಿ.17ರಂದು ಬಿಜೆಪಿ ಮುಖಂಡ ತಮ್ಮೇಶ ಗೌಡ ದಾಖಲೆಗಳನ್ನು ಬಿಡುಗಡೆ ಮಾಡಿ ಸಚಿವರ ವಿರುದ್ಧ ಆರೋಪ ಮಾಡಿದ್ದರು. ನಕಲಿ ದಾಖಲೆ ಸೃಷ್ಟಿಸಿ ಕಂದಾಯ ಸಚಿವರು ಖರಾಬು ಜಮೀನನ್ನು ಅವರ ಹೆಸರಿಗೆ ಮಾಡಿಕೊಂಡಿದ್ದಾರೆ. ಸರ್ಕಾರಿ ಜಮೀನು ಉಳಿಸಲು ಹೋರಾಟ ಮಾಡುತ್ತೇವೆ ಎನ್ನುವವರೇ ಈಗ ಜಮೀನು ಕಬಳಿಸಿದ್ದಾರೆ. ಮೂಲ ದಾಖಲೆಗಳನ್ನು ಫೋರ್ಜರಿ ಮಾಡಲಾಗಿದೆ ಎಂದು ದೂರಿದರು.
ಆರೋಪ ಕೇಳಿ ಬರುತ್ತಿದ್ದಂತೆ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಕೃಷ್ಣಭೈರೇಗೌಡ ಅವರು, ಅದು ನಮ್ಮ ತಾತನವರ ಜಾಗ, ಅವರಿಗೆ ಮೂರು ಜನ ಮಕ್ಕಳು . ಎಲ್ಲರಿಗೆ ಭಾಗ ಆಗಿ ನಮಗೆ ಬಂದಿದೆ ಎಂದು ಸ್ಪಷ್ಟನೆ ನೀಡಿದ್ದರು. ಅಲ್ಲದೆ ಮಹಾರಾಜರ ಕಾಲದಲ್ಲಿ ಜಮೀನಾಗಿದ್ದು, ಕ್ರಮ ಆಗಿದೆ ಎಂದು ಹೇಳುತ್ತಿದ್ದಾರೆ, ಇದಕ್ಕೆಲ್ಲ ದಾಖಲೆ ತೋರಿಸಲಿ ಎಂದು ಸವಾಲು ಹಾಕಿದರು.
ಬಿಜೆಪಿ ಉಪಾಧ್ಯಕ್ಷ ವಿಜಯ್​ ಕುಮಾರ್​, ವಕೀಲ ಶ್ರೀನಿವಾಸ್​, ಮುಖಂಡರಾದ ಶಿಳ್ಳಂಗೇರೆ ಹಮೇಶ್​, ಸಮಾ ಬಾಬು, ಕೀಲಾರಪೇಟೆ ಅಪ್ಪಿ, ಕೃಷ್ಣಪ್ಪ ಇದ್ದರು.