ಬೆಂಗಳೂರಿನ ಜೆಪಿ ಭವನದಲ್ಲಿ ಕೋಲಾರ ಜೆಡಿಎಸ್ ಮುಖಂಡರ ಸಭೆಯಲ್ಲಿ ಸಚಿವ ಎಚ್.ಡಿ.ಕುಮಾರಸ್ವಾಮಿ, ಜೆ.ಕೆ.ಕೃಷ್ಣಾರೆಡ್ಡಿ, ಜಿ.ಕೆ.ವೆಂಕಟಶಿವಾರೆಡ್ಡಿ, ಸಿಎಂಆರ್ ಶ್ರೀನಾಥ್ ಮತಿತರರಿದ್ದರು. 
ಕೋಲಾರ

ವರಿಷ್ಠರ ಎದುರು ಬಣ ಸಂಘರ್ಷ!

ಕಿರುವಾರ ಎಸ್.ಸುದರ್ಶನ್ ಕೋಲಾರ
ಬೆಂಗಳೂರಿನ ಜೆಪಿ ಭವನದಲ್ಲಿ ಗುರುವಾರ ಆಯೋಜನೆ, ಮಾಡಲಾಗಿದ್ದ ಸಭೆಯಲ್ಲಿ ಜಿಲ್ಲಾ ಜೆಡಿಎಸ್ ಮುಖಂಡರ ಬಣ ಸಂಘರ್ಷ ನಡೆದಿದ್ದು, ಕೋರ್ ಕಮಿಟಿ, ರಾಜ್ಯ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ ಜೆಡಿಎಸ್ ಮುಖಂಡರ, ಜನಪ್ರತಿನಿಧಿಗಳ ಸಭೆಯನ್ನು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮುಖಂಡರಿಂದ ಪಕ್ಷದ ಸ್ಥಿತಿಗತಿ ಬಗ್ಗೆ ಕ್ಷೇತ್ರವಾರು ಮಾಹಿತಿ ಪಡೆದುಕೊಂಡರು. ಈ ಮಧ್ಯೆ ಮುಖಂಡ ಸಿಎಂಆರ್ ಶ್ರೀನಾಥ್ ಹಾಗೂ ಐಪಿಎಸ್ ಅಧಿಕಾರಿ ದೇವರಾಜ್ ಬೆಂಬಲಿಗರ ನಡುವೆ ವಾಗ್ವಾದ ನಡೆದಿದ್ದು, ಬಣ ಪ್ರದರ್ಶನವಾಗಿದೆ. ಜಿಲ್ಲಾಧ್ಯಕ್ಷ ಸೇರಿ ವಿವಿಧ ಪದಾಧಿಕಾರಿಗಳ ಬದಲಾವಣೆಯ ಬಗ್ಗೆಯೂ ಕೆಲ ಮುಖಂಡರು ವಿಚಾರ ಪ್ರಸ್ತಾಪ ಮಾಡಿದ್ದಾರೆ. ಇದು ರಾಜ್ಯ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದ್ದು, ವ್ಯತ್ಯಾಸ ಸರಿಪಡಿಸಿಕೊಂಡು ಹೋಗಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಪದಾಧಿಕಾರಿಗಳ ನೇಮಕಕ್ಕೆ ಪಟ್ಟು: ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರು ಕಾಯಂ ಆಗಿ ಉಳಿದಿದ್ದು, ಬದಲಾವಣೆ ಮಾಡಬೇಕು ಎಂಬ ಕೂಗು ಎದ್ದಿದೆ. ಸುಮಾರು ವರ್ಷಗಳಿಂದ ಪದಾಧಿಕಾರಿಗಳ ನೇಮಕ ಆಗದಿರುವುದು ಪಕ್ಷದ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿಲ್ಲ. ಇದರಿಂದ ನಾವಿಕನಿಲ್ಲದ ದೋಣಿಯಾಗಿದೆ ಎಂಬುದು ಪಕ್ಷದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಪಕ್ಷದ ಮುಖಂಡರು ಜಿಲ್ಲೆಗೆ ಆಗಮಿಸಿದಾಗ ಜಿಲ್ಲಾಧ್ಯಕ್ಷ ಸೇರಿ ವಿವಿಧ ಘಟಕಗಳ ಪದಾಧಿಕಾರಿಗಳ ನೇಮಕ ಮಾಡಬೇಕು ಎಂದು ಕಾರ್ಯಕರ್ತರು ಬೇಡಿಕೆ ಇಟ್ಟಿರುವ ಬಗ್ಗೆ ಸಭೆಯ ಗಮನಕ್ಕೆ ತಂದಾಗ ಅತಿ ಶೀಘ್ರು ಜಿಲ್ಲಾಧ್ಯಕ್ಷ ಮತ್ತು ಪದಾಧಿಕಾರಿಗಳ ನೇಮಕ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಕೆಲ ಮುಖಂಡರು ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರವಿ ಎಲೆಕ್ಟ್ರಾನಿಕ್ಸ್ ನಾಗರಾಜ್, ಕೋಮುಲ್ ನಿರ್ದೇಶಕರಾದ ಡಿ.ವಿ.ಹರೀಶ್, ಸಿಎಂಆರ್ ಶ್ರೀನಾಥ್ ಆಕಾಂಕ್ಷಿಗಳಾಗಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಹೊತ್ತು ಕೆಲಸ ಮಾಡಬೇಕು. 2ವರ್ಷ ಪಕ್ಷ ಬಲಪಡಿಸುವುದು, ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ತಳಮಟ್ಟದಿಂದ ಸಂಘಟನೆ ಗಟ್ಟಿಗೊಳಿಸುವ ಬಗ್ಗೆ ಮುಖಂಡರಿಗೆ ಎಚ್.ಡಿ.ಕೆ ನೀಡಿದ್ದಾರೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಪಕ್ಷಕ್ಕೆ ಬಲಿಷ್ಠ ನೆಲೆಗಳಾಗಿದ್ದವು. ಸಂಘಟನೆಯಿಲ್ಲದೆ ಸೊರಗಿದೆ ಎಂಬ ಬಗ್ಗೆ ಕಾರ್ಯಕರ್ತರು ನಿರಂತರವಾಗಿ ಬೇಸರ
ಎಸ್ಐಆರ್ ಗಂಭೀರವಾಗಿ ಎಲ್ಲರೂ ಜವಾಬ್ದಾರಿ ಪರಿಗಣಿಸಿ ಈಗಿನಿಂದ ನಿಮಗೆ ವಿಶ್ರಾಂತಿ ಎನ್ನುವುದು ಇಲ್ಲ. ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐ ಆರ್) ಪ್ರಕ್ರಿಯೆಯನ್ನು ಕಾರ್ಯಕರ್ತರು ಮತ್ತು ಮುಖಂಡರು ಎಚ್ಚರಿಕೆಯಿಂದ ಗಮನಿಸಬೇಕು. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೊಡುವುದಿಲ್ಲ ಎಂದು ಭೀತಿ ಸೃಷ್ಟಿಸಿ ಜನರಲ್ಲಿ ಭಯದ ವಾತಾವರಣ ಉಂಟು ಮಾಡಿದೆ. ಈ ಸಂದರ್ಭದಲ್ಲಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ನಾವು ಕಣ್ಣಲ್ಲಿ ಕಣ್ಣಿಟ್ಟು ಗಮನಿಸಬೇಕಾಗಿದೆ ಎಂದು ಎಚ್‌ಡಿಕೆ ಸೂಚಿಸಿದ್ದಾರೆ.
ತಳಮಟ್ಟದಿಂದ ಸಂಘಟಿಸಲು ತಾಕೀತು
ಜಿಲ್ಲೆಗಳಲ್ಲಿ ತೋಡಿಕೊಳ್ಳುತ್ತಿದ್ದಾರೆ. ಮುಖಂಡರು ಇದ್ದೀರಿ. ಶಾಸಕರಿದ್ದಾರೆ, ಒಬ್ಬರು ಸಂಸದರೂ ಇದ್ದಾರೆ. ಪಕ್ಷ ಬಲಪಡಿಸಲು ಸಮಸ್ಯೆ ಏನು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಬರ ಸೃಷ್ಟಿಯಾಗಿದೆ. ಜನರ ಸಮಸ್ಯೆ ಪರಿಹಾರಕ್ಕೆ ಹೋರಾಟ ರೂಪಿಸಿ, ಯುವ ಜನರನ್ನು ಪಕ್ಷಕ್ಕೆ ಕರೆತರುವ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.
ಹಿರಿಯರಿಗೆ ಜವಾಬ್ದಾರಿ
2028ರ ಚುನಾವಣೆಗೆ ಇನ್ನೂ 2 ವರ್ಷ ಬಾಕಿಯಿದ್ದು, ಕಳೆದ ಚುನಾವಣೆಗೆ ಸ್ಪರ್ಧಿಸಿ ಪರಾಜಿತಗೊಂಡಿರುವ ಸಿಎಂಆರ್ ಶ್ರೀನಾಥ್, ಸಮಾಜ ಸೇವೆ ಮೂಲಕ ಐಪಿಎಸ್ ಅಧಿಕಾರಿ ಡಿ.ದೇವರಾಜ್ ಅವರು ಕ್ಷೇತ್ರದಲ್ಲಿ ವಿವಿಧ ರೀತಿಯ ಸಾಮಾಜಿಕ ಕಾರ್ಯಕ್ರಮ ಕೈಗೊಳ್ಳುತ್ತಿದ್ದಾರೆ. ಜೆಡಿಎಸ್ ಮುಖಂಡರು ಸುಮಾರು ಮಂದಿ ಇದೀಗ ದೇವರಾಜ ಅವರ ಜತೆ ಗುರುತಿಸಿಕೊಂಡಿದ್ದು, ಎರಡೂ ಬಣಗಳ ನಡುವಿನ ಅಭಿಪ್ರಾಯಗಳು ಸ್ಪೋಟಗೊಂಡಿರುವುದು ವರಿಷ್ಠರ ತಲೆ ನೋವಿಗೆ ಕಾರಣವಾಗಿದೆ. ಈ ವ್ಯತ್ಯಾಸ ಸರಿಪಡಿಸಿಕೊಂಡು ಹೋಗಬೇಕಾದ ಜವಾಬ್ದಾರಿಯನ್ನು ಹಿರಿಯ ಮುಖಂಡರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ವಹಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.