ಮುಳಬಾಗಿಲು: ವನ್ಯಜಿವಿಗಳ ಸಂರಕ್ಷಣೆ ಕೇವಲ ಅರಣ್ಯ ಇಲಾಖೆ ಜವಾಬ್ದಾರಿಯಲ್ಲ. ಪ್ರಕೃತಿಯ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಉಪ ವಲಯ ಅರಣ್ಯಾಧಿಕಾರಿ ಎಸ್. ಸೋಮನಾಥ ಕುಮಾರ್ ಹೇಳಿದರು.
ತಾಲೂಕಿನ ಕಾಶೀಪುರ ವೃತ್ತದಲ್ಲಿರುವ ಎಲ್.ಎಚ್. ಇಂಟರ್ನ್ಯಾಷನಲ್ ಶಾಲೆಯಲ್ಲಿ ಶುಕ್ರವಾರ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ "ವನ್ಯಜಿವಿ ಸಪ್ತಾಹ-' ಅಂಗವಾಗಿ ಆಯೋಜಿಸಿದ್ದ ಪ್ರಬಂಧ, ಚಿತ್ರಕಲೆ ಹಾಗೂ ಆಶುಭಾಷಣ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ವನ್ಯಜಿವಿ ಸಂರಕ್ಷಣಾ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು. ಮನುಷ್ಯನ ಬದುಕು ಪರಿಸರವನ್ನು ಅವಲಂಬಿಸಿದ್ದು, ಪ್ರಾಣಿ, ಪಕ್ಷಿ, ಮರ&ಗಿಡ, ಕಾಡು, ಬೆಟ್ಟ ಹಾಗೂ ಜಲಚರಗಳು ಪರಿಸರ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದೆ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದ್ದು, ಅವುಗಳ ಅಸ್ತಿತ್ವ ಉಳಿದಾಗ ಮಾತ್ರ ಪರಿಸರ ಸಮತೋಲನ ಸಾಧ್ಯ. ಬಾಲ್ಯದಿಂದಲೇ ವಿದ್ಯಾರ್ಥಿಗಳು ಪ್ರಕೃತಿ ವನ್ಯಜಿವಿಗಳ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕು ಎಂದರು.
ವನ್ಯಜಿವಿಗಳ ಮಹತ್ವವನ್ನು ಮಕ್ಕಳಿಗೆ ತಿಳಿಸುವ ಉದ್ದೇಶದಿಂದ ಶಾಲಾ&-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ವನ್ಯಜಿವಿಗಳಿಗೆ ಹಾನಿ ಮಾಡುವುದು ಅಥವಾ ಸ್ವಾರ್ಥಕ್ಕಾಗಿ ಅವುಗಳನ್ನು ಬಳಸಿಕೊಳ್ಳುವುದು ಕಾನೂನುಬಾಹಿರ, ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ, ಆದ್ದರಿಂದ ವಿದ್ಯಾರ್ಥಿಗಳು ವನ್ಯಜಿವಿಗಳಿಗೆ ತೊಂದರೆ ನೀಡದೆ, ಸಂರಕ್ಷಣೆ ಸಂದೇಶ ಸಮಾಜಕ್ಕೂ ತಲುಪಿಸಬೇಕು ಎಂದು ತಿಳಿಸಿದರು.
ಪ್ರಾಂಶುಪಾಲ ಕೆ.ಆರ್. ಶಿವರಾಜು ಮಾತನಾಡಿ, ಹಿಂದೆ ಸಾಮಾನ್ಯವಾಗಿ ಕಾಣಸಿಗುತ್ತಿದ್ದ ಅನೇಕ ಪ್ರಾಣಿ, ಪಕ್ಷಿಗಳು ಅಪರೂಪವಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ನವಿಲು, ಜಿಂಕೆ ಸೇರಿ ವಿವಿಧ ವನ್ಯಜಿವಿಗಳು ಹೊಲಗದ್ದೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವುಗಳಿಗೆ ಯಾರೂ ತೊಂದರೆ ನೀಡಬಾರದು. ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಜಿಂಕೆಗೆ ಚಿಕಿತ್ಸೆ ಕೊಡಿಸಿ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಎಲ್ಲಿಯಾದರೂ ವನ್ಯಜಿವಿಗಳು ಗಾಯಗೊಂಡಿರುವುದು ಕಂಡುಬಂದರೆ ನೆರವಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.
ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರ ದಿನ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದ ಶಿಕ್ಷಕರಿಗೂ ಬಹುಮಾನ ವಿತರಿಸಲಾಯಿತು.