ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ಕೈಬಿಟ್ಟು, ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳ ದುರಸ್ತಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂದ ಮುಖಂಡರು ಎಡಿಸಿ ಮಂಗಳಾಗೆ ಮನವಿ ಸಲ್ಲಿಸಿದರು. ರೈತ ಸಂದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ಮರಗಲ್​ ಶ್ರೀನಿವಾಸ್​, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್​, ಗಿರೀಶ್​, ರಾಜ್ಯ ಮುಖಂಡ ಕಮದಟ್ಟಿ ಚಲಪತಿ, ಮಂಜುನಾಥ್​, ತಿಮ್ಮಣ್ಣ, ಪುತ್ತೇರಿ ರಾಜು ಇದ್ದರು. 
ಕೋಲಾರ

ಸರ್ಕಾರಿ ಶಾಲೆಗಳ ವಿಲೀನ ಕೈಬಿಡಿ

ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳನ್ನು ವಿಲೀನ ಕೈಬಿಟ್ಟು, ಶಿಥಿಲಾವಸ್ಥೆಯಲ್ಲಿರುವ ಶಾಲೆಗಳ ದುರಸ್ತಿಗೆ ಅನುದಾನ ಬಿಡುಗಡೆಗೆ ರೈತ ಸಂಘ ಆಗ್ರಹ

ಕೋಲಾರ: ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ಕೈಬಿಟ್ಟು, ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳ ದುರಸ್ತಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರೈತ ಸಂದ ಮುಖಂಡರು ಅಪರ ಜಿಲ್ಲಾಧಿಕಾರಿ ಎಸ್​.ಎಂ.ಮಂಗಳಾ ಅವರಿಗೆ ಮನವಿ ಸಲ್ಲಿಸಿದರು.

ರೈತ ಸಂದ ಮಹಿಳಾ ಜಿಲ್ಲಾಧ್ಯೆ ಎ.ನಳಿನಿಗೌಡ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಬದಲು ಖಾಸಗಿ ಶಾಲೆಗಳೊಂದಿಗೆ ವಿಲೀನಗೊಳಿಸುವ ಸರ್ಕಾರದ ನಿರ್ಧಾರ ಬಡ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅತಿ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ರಾಜಕಾರಣಿಗಳು ಮೊದಲು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲಿ. ಆಗ ಸರ್ಕಾರಿ ಶಾಲೆಗಳ ಗತವೈಭವ ಏನೆಂಬುದು ತಿಳಿಯಲಿದೆ. ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮರ್ಪಕವಾಗಿ ಸಮವಸ್ತ$, ಪಠ್ಯಪುಸ್ತಕ, ಶೂ ಹಾಗೂ ಗುಣಮಟ್ಟದ ಊಟ ಒದಗಿಸಲು ಸಾಧ್ಯವಾಗದ ಸರ್ಕಾರಕ್ಕೆ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದರು.

ಸಂದ ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸುವ ಇಚ್ಛಾಶಕ್ತಿ ಸರ್ಕಾರಕ್ಕಿದ್ದರೆ ರಾಜ್ಯದ ಕೈಗಾರಿಕಾ ಮಾಲೀಕರಿಂದ ಸಿಎಸ್​ಆರ್​ ಅನುದಾನ ಪಡೆದು ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗಳನ್ನು ಅಭಿವೃದ್ಧಿಪಡಿಸಲಿ. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಗ್ರಾಮೀಣ ಭಾಗದ ರೈತರು ಹಾಗೂ ಕೂಲಿ ಕಾರ್ಮಿಕರನ್ನು ಸಂಟಿಸಿ ಶಿಕ್ಷಣ ಕ್ರಾಂತಿಯ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ಎಡಿಸಿ ಮಂಗಳಾ ಅವರು ಮನವಿ ಸರ್ಕಾರಕ್ಕೆ ರವಾನಿಸುವುದಾಗಿ ಭರವಸೆ ನೀಡಿದರು.