ಜಿಲ್ಲೆ

ಮಕ್ಕಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ

ಕಿರಣ್ ಮಾದರಹಳ್ಳಿ

ಕೊಳ್ಳೇಗಾಲ: ಪಟ್ಟಣದ ರೋಟರಿ ಭವನದಲ್ಲಿ ಮಂಗಳವಾರ ಅಕ್ಸಲರೇಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ಹಾಗೂ ಬೆಂಗಳೂರಿನ ಎಫಿಕಸಿ ಲೈಫ್ ಸೈನ್ಸ್ ಅನಾಲಿಟಿಕ್ಸ್ ಪ್ರೈವೇಟ್ ಲಿಮೆಟೆಡ್ ಸಹಯೋಗದಲ್ಲಿ ಕೋವಿಡ್‌ನಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕಗಳನ್ನು ವಿತತಿಸಿದರು.

ಕಾರ್ಯಕ್ರಮದಲ್ಲಿ ಸುಮಾರು 105 ಮಕ್ಕಳಿಗೆ ಶಾಲಾ ಬ್ಯಾಗ್ ಹಾಗೂ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಈ ವೇಳೆ ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯು ಪರೀಕ್ಷೆಯಲ್ಲಿ ಶೇ.75 ಕ್ಕಿಂತ ಹೆಚ್ಚು ಅಂಕ ಗಳಿಸಿದ 7ಮಕ್ಕಳನ್ನು ಗೌರವಿಸಲಾಯಿತು.
ಈ ಬಗ್ಗೆ ಆಕ್ಸಲರೇಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ಸಂಸ್ಥಾಪಕ ಅನುರಾಗ್ ಶ್ರೀ ವಾಸ್ತವ್ ಮಾತನಾಡಿ, ನಮ್ಮ ಸಂಸ್ಥೆ ಕಳೆದ ಆರು ವರ್ಷಗಳಿಂದ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ. ಅದರಲ್ಲೂ ಕರೋನಾ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚು ಒತ್ತು ನೀಡಲಾಗಿದೆ. ಅಲ್ಲದೆ ಇಂತಹ ಮಕ್ಕಳಿಗೆ ಸಹಾಯಧನ ಹಾಗೂ ಅಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಆಕ್ಸಲರೇಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ಮಾರ್ಗದರ್ಶಕ ರವಿ ಬಳೆ, ಬಳಿಕ ಪ್ರಫುಲ್ಲ ಸಂದೀಪ್, ರವಿಶಂಕರ್, ಸಿ.ಎನ್. ಚೇತನ್, ಮನೋಜ್ ಕುಮಾರ್ ಮತ್ತಿತರರಿದ್ದರು.