ಕೊಳ್ಳೇಗಾಲ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯ ಶ್ರೀ ಗುರುಮಲ್ಲೇಶ್ವರ ಕಾಂಪ್ಲೆಕ್ಸ್‌ನಲ್ಲಿರುವ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಬುಧವಾರ ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಖಂಡಿಸಿ ಸಂಘದ ಪದಾಧಿಕಾರಿಗಳು ಸಭೆ ನಡೆಸಿದರು.
ರೇಣುಕಸ್ವಾಮಿ ಅವರನ್ನು ಅಮಾನುಷವಾಗಿ ಕೊಲೆ ಮಾಡಿರುವುದು ಖಂಡನೀಯ. ನಾವು ಮೃತರ ಕುಟುಂಬಕ್ಕೆ ನೈತಿಕ ಸ್ಥೈರ್ಯ ತುಂಬಲು ಉಗ್ರ ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ದಿಟ್ಟತನ ಪ್ರದರ್ಶನ ಮಾಡಿದೆ. ರೇಣುಕಸ್ವಾಮಿ ಕೊಲೆ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕಿದೆ. ಉನ್ನತ ಮಟ್ಟದ ತನಿಖೆ ಆಗಬೇಕಿದೆ. ಅಂತೆಯೇ, ಸರ್ಕಾರ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಒಂದು ವೇಳೆ ಸರ್ಕಾರ ಬಂಧಿತರಿಗೆ ಪರೋಕ್ಷವಾಗಿ ಸಹಾಯ ಮಾಡಿದ್ದಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ಮಾಡಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಳ್ಳೇಗಾಲ ತಾಲೂಕು ಘಟಕದ ನಿರ್ಧರಿಸಿತು.
ಸಭೆಗೂ ಮುನ್ನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಪದಾಧಿಕಾರಿಗಳು ರೇಣುಕಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಬಿ.ಮಹದೇವ ಪ್ರಸಾದ್, ಉಪಾಧ್ಯಕ್ಷ ಪುಟ್ಟಣ್ಣ, ಕಾರ್ಯದರ್ಶಿ ಇಂದ್ರೇಶ್, ನಿರ್ದೇಶಕರಾದ ವೀರಭದ್ರಸ್ವಾಮಿ, ರಾಜು, ತೋಟದ ಗಿರೀಶ್, ಎನ್.ಮಂಜುನಾಥ್, ಪ್ರದೀಪ್ ಮತ್ತಿತರಿದ್ದರು.