ಜಿಲ್ಲೆ

ಅಕ್ರಮ ಮದ್ಯ ಮಾರಾಟಗಾರನ ಬಂಧನ

ಕಿರಣ್ ಮಾದರಹಳ್ಳಿ

ಕೊಳ್ಳೇಗಾಲ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಳಂದೂರು ತಾಲೂಕಿನ ಅಗರ ಗ್ರಾಮದ ನಾಗೇಂದ್ರ (27) ಬಂಧಿತ ಆರೋಪಿ. ಈತ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 90 ಎಂ.ಎಲ್‌ನ 15 ಟೆಟ್ರಾ ಪೌಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.