ಜಿಲ್ಲೆ

21ರಂದು ಯೋಗ ದಿನಾಚರಣೆ

ಕಿರಣ್ ಮಾದರಹಳ್ಳಿ

ಕೊಳ್ಳೇಗಾಲ: ಪಟ್ಟಣದ ಎಂಜಿಎಸ್‌ವಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿ ಸಹಯೋಗದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂ.21 ರಂದು ಬೆಳಗ್ಗೆ 6 ರಿಂದ 7 ಗಂಟೆವರೆಗೆ ಯೋಗ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಗೌರವಾಧ್ಯಕ್ಷ ಟಿ.ಎನ್.ಆನಂದರಾಮ ಶೆಟ್ಟಿ, ಅಧ್ಯಕ್ಷ ಪಿ.ಮಂಜುನಾಥ್, ಮಾಜಿ ಅಧ್ಯಕ್ಷ ಎಚ್.ಎಸ್. ನಟರಾಜನ್, ಯೋಗ ಪ್ರಧಾನ ಶಿಕ್ಷಕ ಎಚ್.ಎಸ್.ಪಶುಪತಿ ಹಾಗೂ ಸಮಿತಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಬೆಳಗ್ಗೆ 6 ರಿಂದ 7 ಗಂಟೆ ವರೆಗೆ ಪಟ್ಟಣದ ಎಂಜಿಎಸ್‌ವಿ ಮೈದಾನದಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. 9008081454 ಸಂಪರ್ಕಿಸಬಹುದು ಎಂದು ಸಮಿತಿ ಅಧ್ಯಕ ಪಿ.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.