ಜಿಲ್ಲೆ

28ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಿರಣ್ ಮಾದರಹಳ್ಳಿ

ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ನಾಯಕ ಸಮುದಾಯ ವಿದ್ಯಾರ್ಥಿಗಳಿಗೆ ಪಟ್ಟಣದ ಗುರುಭವನದಲ್ಲಿ ಜೂ.28ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕೊಳ್ಳೇಗಾಲ ತಾಲೂಕು ಸರ್ಕಾರಿ ನಾಯಕ ನೌಕರರ ಸಂಘದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಕಾರ್ಯದರ್ಶಿ ಡಾ.ವಿ.ಧನಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.