ಕೊಳ್ಳೇಗಾಲ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಆರೋಪ ಆಧಾರ ರಹಿತವಾಗಿದೆ. ದುರುದ್ದೇಶದಿಂದ ಕೆಲವರು ಟೀಕೆ ಮಾಡುತ್ತಿರುವುದು ಸಲ್ಲದು ಎಂದು ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್ ಮಧುವನಹಳ್ಳಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಒಬ್ಬ ಜನ ನಾಯಕ. ರಾಜಕೀಯ ಜೀವನದಲ್ಲಿ ಸಚಿವ, ಉಪ ಮುಖ್ಯ ಮಂತ್ರಿ ಹಾಗೂ ಮುಖ್ಯಮಂತ್ರಿ ಸ್ಥಾನ ನಿರ್ವಹಿಸಿದ್ದಾರೆ. ಹಲವಾರು ಜನಪರ ಕಾರ್ಯಗಳನ್ನೂ ಮಾಡಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಸಿದ್ದರಾಮಯ್ಯ ಅವರ ಜನಪ್ರಿಯತೆ ಸಹಿಸದ ಕೆಲವರು ವ್ಯವಸ್ಥಿತವಾಗಿ ಅಪ ಪ್ರಚಾರ ಮಾಡುತ್ತಿದ್ದಾರೆ. ಇವೆಲ್ಲವೂ ನಿರಾಧಾರ ಎಂದು ತಿಳಿಸಿದ್ದಾರೆ.