ಕೊಳ್ಳೇಗಾಲ: ತಾಲೂಕಿನ ನದಿ ದಾಸನಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಶೂ ವಿತರಣೆ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಮಾತನಾಡಿ, ಎರಡು ದಿನಗಳಿಂದ ತಾಲೂಕಿನಾದ್ಯಂತ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ ಮಾಡಲಾಗುತ್ತಿದೆ. ನದಿ ಪಾತ್ರದ ಗ್ರಾಮಗಳಾದ ದಾಸನಪುರ, ಹರಳೆ, ಹಳೇ ಹಂಪಾಪುರ ಶಾಲೆಯಗಳ ಮುಖ್ಯ ಶಿಕ್ಷಕರಿಗೆ ಪ್ರವಾಹದ ಮುನ್ನೆಚರಿಕೆ ಕ್ರಮಗಳನ್ನು ಅನುಸರಿಸುವಂತೆ ಮತ್ತು ಶಾಲೆಯ ದಾಖಲಾತಿಗಳು ಹಾಗೂ ಮಕ್ಕಳ ರಕ್ಷಣೆಯ ಬಗ್ಗೆ ಜಾಗೃತಿ ವಹಿಸಬೇಕು ಎಂದು ಸೂಚನೆ ನೀಡಿದ್ದೇನೆ ಎಂದರು. ದಾಸನಪುರ ಶಾಲೆಯ ಮುಖ್ಯ ಶಿಕ್ಷಕ ಬಸವರಾಜು, ಶಿಕ್ಷಕರಾದ ಮಲ್ಲಿ ಕಾರ್ಜುನ, ಎಸ್‌ಡಿಎಂಸಿ ಅಧ್ಯಕ್ಷ ವೀರಭದ್ರ ಇದ್ದರು.