ಜಿಲ್ಲೆ

ಅಪ್ರಾಪ್ತರಿಗೆ ವಾಹನ ನೀಡಬೇಡಿ

ಕೊಳ್ಳೇಗಾಲ: ಪಟ್ಟಣದ ಮಸೀದಿ ವೃತ್ತದಲ್ಲಿ ಪಟ್ಟಣ ಪೊಲೀಸ್ ಠಾಣೆ ವತಿಯಿಂದ ಸೋಮವಾರ ಸಂಚಾರ ಮತ್ತು ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ ನಡೆಯಿತು.

ಪಟ್ಟಣ ಪೊಲೀಸ್ ಠಾಣೆ ಪಿಎಸ್‌ಐ ಮಹೇಶ್ ಮಾತನಾಡಿ, ವಾಹನ ಚಾಲಕರು ಕಡ್ಡಾಯವಾಗಿ ರಸ್ತೆ ನಿಯಮ ಪಾಲಿಸಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮಟ್ ಧರಿಸಬೇಕು. ಕಾರು ತಪ್ಪದೆ ಸೀಟ್ ಬೆಲ್ಟ್ ಧರಿಸಿ ವಾಹನ ಚಲಾಯಿಸಬೇಕು. ಸೂಕ್ತ ದಾಖಲೆಗಳು ಇಲ್ಲದಿದ್ದಲ್ಲಿ ವಾಹನಗಳನ್ನು ಚಲಾಯಿಸಬೇಡಿ. ಮದ್ಯ ಕುಡಿದು ವಾಹನ ಚಲಾಯಿಸಬೇಡಿ. ಅಪ್ರಾಪ್ತರು ವಾಹನ ಚಲಾಯಿಸುವುದು ನಿಯಮಬಾಹಿರ. ಈ ಬಗ್ಗೆ ಪಾಲಕರು ಎಚ್ಚರವಹಿಸಿ ಎಂದು ಸಲಹೆ ನೀಡಿದರು. ನಗರಸಭೆ ಸದಸ್ಯ ಮಂಜುನಾಥ್, ಹೆಡ್ ಕಾನ್‌ಸ್ಟೇಬಲ್ ಸೂರ್ಯ ಪ್ರಕಾಶ್, ಪೊಲೀಸ್ ಸಿಬ್ಬಂದಿ ಇದ್ದರು.