ಕೊಳ್ಳೇಗಾಲ: ಪಟ್ಟಣದ ಪೊಲೀಸ್ ಠಾಣೆಯ ನೂತನ ಕಾನೂನು ಸುವ್ಯವಸ್ಥೆ ಉಪನಿರೀಕ್ಷಕರಾಗಿ ಬಿ.ವಿ.ವರ್ಷಾ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆಯ ಉಪನಿರೀಕ್ಷಕರಾಗಿ ಎಸ್.ಎ.ಸುಪ್ರೀತ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ಕೊಳ್ಳೇಗಾಲ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ ಬಿ.ಕೆ.ಮಹೇಶ್ ಅವರಿಗೆ ಯಾವುದೇ ಸ್ಥಳ ತೋರಿಸಿಲ್ಲ. ಬಿ.ಕೆ.ಮಹೇಶ್ ಅವರಿಂದ ತೆರವಾದ ಸ್ಥಾನಕ್ಕೆ ಇದೀಗ ಮಂಡ್ಯದ ಸೆಂಟ್ರಲ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐ ಬಿ.ವಿ.ವರ್ಷಾ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆ ಯ ಪಿಎಸ್‌ಐ ಗಣೇಶ್ ಅವರನ್ನು ಕೊಡಗು ಜಿಲ್ಲೆಯ ಕುಶಾಲನಗರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದು, ಇವರ ಸ್ಥಳಕ್ಕೆ ಹಾಸನ ಜಿಲ್ಲೆ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಎಸ್.ಎ.ಸುಪ್ರೀತ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.