ಕೊಳ್ಳೇಗಾಲ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ಗಳನ್ನು ಹೆಚ್ಚೆಚ್ಚು ಮನೆಗಳಿಗೆ ತಲುಪಿಸಿದ ತಾಲೂಕಿನ ಧನಗೆರೆ ಗ್ರಾಮದ ನಿವಾಸಿ ಕಾಂಗ್ರೆಸ್ ಕಾರ್ಯಕರ್ತೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಟಿವಿ ಉಡುಗೊರೆ ನೀಡಿದ್ದಾರೆ.
ಧನಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಸುವರ್ಣಾ ಅವರಿಗೆ ಡಿ.ಕೆ.ಶಿವಕುಮಾರ್ ಅವರಿಂದ ಟಿವಿ ಉಡುಗೊರೆ ದೊರೆತಿದೆ. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 10 ಟಿವಿಗಳು ಕಾರ್ಯಕರ್ತೆಯರಿಗೆ ದೊರೆತಿದೆ ಎಂದು ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಕುಂದವರ್ಮ ತಿಳಿಸಿದ್ದಾರೆ.
ವಿಜಯವಾಣಿಯೊಂದಿಗೆ ಮಾತನಾಡಿದ ಕಾರ್ಯಕರ್ತೆ ಸುವರ್ಣಾ, ಚುನಾವಣೆ ಪೂರ್ವದಲ್ಲಿ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಣೆ ಮಾಡುವಂತೆ ಪಕ್ಷದಿಂದ ಸೂಚನೆ ಬಂದಿತ್ತು. ಅಂತೆಯೇ, ನಮ್ಮ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ್ದೇವು. ಈ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಿವಿ ನೀಡಿದ್ದು, ಬಹಳ ಸಂತೋಷವಾಗಿದೆ ಎಂದರು.
ವಿಧಾನಾಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಮನೆ ಮನೆಗೆ ತಲುಪಿದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಟಿವಿ ಉಡುಗೊರೆ ನೀಡುವುದಾಗಿ ಘೋಷಿಸಿದ್ದರು. ಅಂತೆಯೇ, ನಂತರ ಕಾಂಗ್ರೆಸ್, ಅಧಿಕಾರಕ್ಕೆ ಬಂದಿದ್ದು ಕೊಟ್ಟ ಮಾತಿನಂತೆ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದವರಿಗೆ ಟಿವಿ ನೀಡಿದ್ದಾರೆ.