ಜಿಲ್ಲೆ

ಕ್ರಿಮಿನಾಶಕ ಸೇವಿಸಿದ್ದವ ಆಸ್ಪತ್ರೆಯಲ್ಲಿ ಸಾವು

ಕೊಳ್ಳೇಗಾಲ: ಹೊಟ್ಟೆನೋವು ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ನಿವಾಸಿ ನಿಂಗರಾಜ ಶೆಟ್ಟಿ (56) ಮೃತರು. ಹಲವು ದಿನಗಳಿಂದ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು. ಮಂಗಳವಾರ ಹೊಟ್ಟೆನೋವು ವಿಪರೀತವಾದ್ದರಿಂದ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಮುಂದಾಗಿದ್ದರು. ಗಮನಿಸಿದ ಸ್ಥಳೀಯರು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದರು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು.