ಕೊಳ್ಳೇಗಾಲ: ಪಟ್ಟಣದ ಶ್ರೀ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಜೋಗಿ ರಂಗಜೋಳಿಗೆಯ 15ನೇ ವರ್ಷದ ಸಂಭ್ರಮಾಚಣೆ ಅಂಗವಾಗಿ ಚಾಮರಾಜನಗರ ಈಶ್ವರಿ ಸೋಷಿಯಲ್ ಟ್ರಸ್ಟ್, ಯಳಂದೂರು ಮ್ಯೂಸಿಕಲ್ ಟ್ರಸ್ಟ್, ಕೊಳ್ಳೇಗಾಲದ ಅಪ್ಟು ಟೀಂ ವತಿಯಿಂದ ಮಾ.10ರಂದು ಸಂಜೆ 6 ಗಂಟೆಗೆ ಮಂಜು ಕೋಡಿ ಉಗನೀಯ ರಚನೆ ಕಂಡಾಯದ ಕೋಳಿ ನಾಟಕ ಪ್ರದರ್ಶನ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ದಿ. ಕೆ.ಶಿವರಾಂ ಅವರಿಗೆ ಭಾವಪೂರ್ಣ ರಂಗನಮನ ಕಾರ್ಯಕ್ರಮ ಆಯೋಜಿಸಲಾಗಿದೆ.
ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಶ್ರೀಜ್ಞಾನ ಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಶಿಲ್ಪಾನಾಗ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಹುಡೇದ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ನುಡಿನಮನ ಸಲ್ಲಿಸಲಿದ್ದಾರೆ.
ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ದತ್ತೇಶ್‌ಕುಮಾರ್, ಎಚ್.ಕೆ ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ, ಕ.ಸಾ.ಪ ತಾಲೂಕು ಅಧ್ಯಕ್ಷ ಎಸ್.ನಾಗರಾಜು ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರು ವಿಭಾಗದ ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕಿ ಪ್ರತಿಭಾ ರಾಚಪ್ಪ, ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯ ಉಪನಿರ್ದೇಶಕ ರಾಚಪ್ಪ, ಪ.ಪೂ.ಶಿ. ಇಲಾಖೆ ಉಮ ನಿರ್ದೇಶಕ ಮಂಜುನಾಥ ಪ್ರಸನ್ನ, ಕೊಳ್ಳೇಗಾಲ ಪೊಲೀಸ್ ನಿರೀಕ್ಷಕ ಶಿವಮಾದಯ್ಯ, ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ಬಿ.ಕೆ ಮಹೇಶ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಗಣೇಶ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಓಲೆ ಮಹಾದೇವ, ಡಿವೈಎಸ್ಪಿ ಎಂ.ಧರ್ಮೇಂದ್ರ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ. ಚಾಮರಾಜನಗರ ಸಾಹಿತಿ ಸ್ವಾಮಿ ಪೊನ್ನಾಚಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ಅಚ್ಗಾಳ್ ಯಾತ್ರಿ ನಿವಾಸ್ ಮಾಲೀಕ ಅಚ್ಗಾಳ್ ನಾಗರಾಜಯ್ಯ ಹಾಗೂ ಕಸಬಾ ಪಿಎಸಿಸಿ ಬ್ಯಾಂಕ್ ಸಿಇಒ ನಾಗರಾಜು ಅವರಿಗೆ ಗೌರವ ಸನ್ಮಾನ ನಡೆಯಲಿದೆ. ಮಿಮಿಕ್ರಿ ಗೋಪಿ ಇತರ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜೋಗಿ ರಂಗಜೋಳಿಗೆಯ ಅಧ್ಯಕ್ಷ ಜೆ. ಮುಡಿಗುಂಡ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.