ಜಿಲ್ಲೆ

31 ರಂದು ಬಸವೇಶ್ವರರ ಜಯಂತಿ

ಕಿರಣ್ ಮಾದರಹಳ್ಳಿ

ಕೊಳ್ಳೇಗಾಲ: ಪಟ್ಟಣದ ಎಂಜಿಎಸ್‌ವಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ, ಶ್ರೀ ಬಸವ ಜಯಂತಿ ಮಹೋತ್ಸವ ಸಮಿತಿ ಹಾಗೂ ತಾಲೂಕು ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳ ಒಕ್ಕೂಟದ ಸಹಯೋಗದಲ್ಲಿ ಮೇ 31 ರಂದು ಜಗಜ್ಯೋತಿ ಶ್ರೀ ಬಸವೇಶ್ವರರ 891ನೇ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 9 ಗಂಟೆಗೆ ಬೆಳ್ಳಿ ಪಲ್ಲಕ್ಕಿಯ ಮೇಲೆ ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರ ಇರಿಸಿ ಮೆರವಣಿಗೆ ಮಾಡಲಾಗುವುದು. ಉತ್ಸವಕ್ಕೆ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಆಲಹಳ್ಳಿ ಪಟ್ಟದ ಮಠಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷ ಶ್ರೀ ಶಿವಕುಮಾರ ಸ್ವಾಮೀಜಿ ಉಪಸ್ಥಿತರಿರುವರು. ಉತ್ಸವ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿ ಜೆಎಸ್‌ಎಸ್ ಮಹಿಳಾ ಕಾಲೇಜು ಆವರಣ ತಲುಪಲಿದೆ. ಈ ವೇಳೆ ವಿವಿಧ ಕಲಾ ತಂಡಗಳು ಭಾಗವಹಿಸಲಿದೆ. ಮಧ್ಯಾಹ್ನ 2 ಗಂಟೆಗೆ ಕಾಲೇಜು ಆವರಣದಲ್ಲಿ ಪ್ರಸಾದ ವಿನಿಯೋಗ ಕಾರ್ಯಕ್ರಮ ಏರ್ಪಡಿಸಲಾಗಿದೆ.