ಮದ್ದೂರು ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಾವಿತ್ರಮ್ಮ ಅವಿರೋಧವಾಗಿ ಆಯ್ಕೆಯಾದರು. ಪಿ.ರುದ್ರೇಶ್, ಕೆ.ಎನ್.ದಿವಾಕರ್, ಜೋಗಿಗೌಡ್ರು, ಲಿಂಗರಾಜು, ಶಿವಲಿಂಗೇಗೌಡ ಇದ್ದರು. 
ಜಿಲ್ಲೆ

ಕೊಪ್ಪ ಗ್ರಾಪಂ ಉಪಾಧ್ಯಕ್ಷೆಯಾಗಿ ಸಾವಿತ್ರಮ್ಮ ಆಯ್ಕೆ

ನಾಗೇಶ ಎಸ್

ಮದ್ದೂರು: ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಾವಿತ್ರಮ್ಮ ಸುರೇಶ್ ಅವಿರೋಧವಾಗಿ ಆಯ್ಕೆಯಾದರು.

ಮಮತಾ ಕೃಷ್ಣೇಗೌಡ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಸಾವಿತ್ರಮ್ಮ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ಬಿಇಒ ಸಿ.ಎಚ್.ಕಾಳಿರಯ್ಯ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
ನೂತನ ಉಪಾಧ್ಯಕ್ಷೆ ಸಾವಿತ್ರಮ್ಮ ಮಾತನಾಡಿ, ಕೊಪ್ಪ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಅಧ್ಯಕ್ಷರ ಜತೆಗೂಡಿ ಶಕ್ತಿಮೀರಿ ಶ್ರಮಿಸಲಿದ್ದು, ಕುಡಿಯುವ ನೀರು, ರಸ್ತೆ, ಚರಂಡಿ, ಇತರ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೊಂಡು ಗ್ರಾಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ತಿಳಿಸಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗವರನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲುಪಿಸುವಂತೆ ಮತ್ತು ವಸತಿ ಇಲ್ಲದವರಿಗೆ ಸೌಲಭ್ಯ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.

ಗ್ರಾಪಂ ಅಧ್ಯಕ್ಷ ರುದ್ರೇಶ್, ಸದಸ್ಯರಾದ ಟಿ.ಎಸ್.ಉಮಾ, ಕವಿತಾ, ಕೆ.ಎಸ್.ನವೀನ್ ಕುಮಾರ್, ಕೆ.ಸಂತೋಷ್ ಕೊಟ್ಟಿಗೆ, ಸಿ.ಪಿ.ಜ್ಯೋತಿ, ಗಿರೀಶ್, ಕುಮಾರ್ ಕೊಪ್ಪ, ಪರ್ವೀಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿ ಗೌಡ್ರು, ವಿಎಸ್‌ಎಸ್‌ಎಸ್‌ಬಿಎನ್ ಅಧ್ಯಕ್ಷ ಲಿಂಗರಾಜು, ನಿರ್ದೇಶಕರಾದ ಶಿವಲಿಂಗೇಗೌಡ, ರಮೇಶ್, ಮುಖಂಡರಾದ ಕಾಂತರಾಜು, ರವಿ, ರಮೇಶ್, ಕೃಷ್ಣೇಗೌಡ, ಪುಟ್ಟಸ್ವಾಮಿ, ಶ್ರೀನಿವಾಸ್, ದಿನೇಶ್ ಇದ್ದರು.