ಜಿಲ್ಲೆ

ಜನಜಾತಿಯ ಉನ್ನತ ಗ್ರಾಮ ಅಭಿಯಾನ ಸದುಪಯೋಗ ಪಡೆಯಿರಿ

Kopala - Raveendra V K

ಕೊಪ್ಪಳ: ಕೇಂದ್ರ ಸಕಾರ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆ ಜಾರಿಗೊಳಿಸಿದೆ. ಯೋಜನೆಯಡಿ ಜಿಲ್ಲೆಯ 40 ಗ್ರಾಮ ಆಯ್ಕೆಯಾಗಿದ್ದು, ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್​ ಅತುಲ್​ ಮನವಿ ಮಾಡಿದ್ದಾರೆ.

ಜಿಲ್ಲೆಯ ಏಳು ತಾಲೂಕುಗಳ 40ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಬುಡಕಟ್ಟು ಸಮುದಾಯಗಳು ಹೆಚ್ಚಾಗಿ ವಾಸಿಸುವ ದೇಶದ 63 ಸಾವಿರ ಗ್ರಾಮಗಳ ಅಭಿವೃದ್ಧಿಗೆ ಕ್ರಿಯಾ ಯೋಜೆನ ಸಿದ್ಧಪಡಿಸಲಾಗಿದೆ. ಕೇಂದ್ರ ಬುಡಕಟ್ಟು ಮಂತ್ರಾಲಯ ಅನುಷ್ಠಾನ ಮಾಡುತ್ತಿದೆ. 5 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ. 2028-29ರ ವೇಳೆಗೆ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ. ಮೊದಲ ಹಂತದಲ್ಲಿ 4 ಸಾವಿರ ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದವರು ಹೆಚ್ಚಾಗಿ ವಾಸಿಸುವ 40 ಗ್ರಾಮಗಳಲ್ಲಿ ಭೌತಿಕ ಗುರಿ ನಿಗದಿಪಡಿಸಲಾಗಿದೆ. 17 ವಿವಿಧ ಇಲಾಖೆಗಳು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಿವೆ. 100 ಬುಡಕಟ್ಟು ಬಹುಉಪಯೋಗಿ ಮಾರ್ಕೆಟಿಂಗ್​ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿನಿಲಯ, ಸರ್ಕಾರಿ ಅಥವಾ ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲ ಸೌಕರ್ಯಗಳನ್ನು ಸುಧಾರಿಸುವುದು. ಅರಣ್ಯಹಕ್ಕು ಕಾಯ್ದೆ&-2006 ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ ಮದ್ಯಸ್ಥಿಕೆಗಳಿಗೆ ಬೆಂಬಲ, ಯೋಜನಾ ನಿರ್ವಹಣಾ ನಿಧಿಗಳು, ಉತ್ಪನ್ನ ಪ್ರದರ್ಶನ ನೀಡುವ ಬುಡಕಟ್ಟು ಜಿಲ್ಲೆಗಳಿಗೆ ಪ್ರೋತ್ಸಾಹ ನೀಡಲು ಅವಕಾಶ ಕಲ್ಪಿಸಲಾಗಿದೆ. ಯೋಜನೆಗೆ ಒಳಪಟ್ಟ 40 ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.