ಜಿಲ್ಲೆ

ಮಾಜಿ ದೇವದಾಸಿ ಮಹಿಳೆಯರಿಗೆ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Kopala - Raveendra V K

ಕೊಪ್ಪಳ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ದೇವದಾಸಿ ಪುನರ್ವಸತಿ ಯೋಜನೆಯಡಿ ಮಾಜಿ ದೇವದಾಸಿ ಮಹಿಳೆಯರಿಗೆ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ನ.15 ಕೊನೆಯ ದಿನ. ಮಾಜಿ ದೇವದಾಸಿ ಮಹಿಳೆಯರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ನಾಲ್ಕು ಭಾವಚಿತ್ರಗಳು ಸೇರಿ ಅಗತ್ಯ ದಾಖಲೆಗಳೊಂದಿಗೆ ಯೋಜನಾಧಿಕಾರಿ, ದೇವದಾಸಿ ಪುನರ್ವಸತಿ ಯೋಜನೆ, ಮಳಿಗೆ ಸಂಖ್ಯೆ 29, ನಗರಾಭಿವೃದ್ಧಿ ಪ್ರಾಧಿಕಾರ ಹೊಸಪೇಟೆ ರಸ್ತೆ, ಕೊಪ್ಪಳ. ಇಲ್ಲಿಗೆ ಸಲ್ಲಿಸಬೇಕು. ಮಾಹಿತಿಗಾಗಿ ದೇವದಾಸಿ ಪುನರ್ವಸತಿ ಯೋಜನೆಯ ಕೊಪ್ಪಳ ಜಿಲ್ಲಾ ಕಚೇರಿ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.