ಕೊಪ್ಪಳ ಜಿಲ್ಲೆ ಜಿಲ್ಲಾಧಿಕಾರಿ ಸುಂದರೇಶ್ ಬಾಬು. 
ಜಿಲ್ಲೆ

ಕೊಪ್ಪಳ ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ಸುಂದರೇಶ್ ಬಾಬು ನೇಮಕ

ಕೊಪ್ಪಳ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸುಂದರೇಶ್ ಬಾಬು ಎಂ. ರನ್ನು ನೇಮಿಸಿ ಸರ್ಕಾರ ಸೋಮವಾರ ಆದೇಶಿಸಿದೆ. ಪಕ್ಕದ ಗದಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 2012ನೇ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ. ವಾರದ ಹಿಂದಷ್ಟೇ ಡಿಸಿ ವಿಕಾಸ್ ಕಿಶೋರ್‌ರನ್ನು ಕೆಪಿಎಸ್ಸಿ ಕಾರ್ಯದರ್ಶಿಯಾಗಿ ವರ್ಗಾಯಿಸಿ ಸರ್ಕಾರ ಆದೇಶಿಸಿತ್ತು. ಅವರ ಸ್ಥಾನಕ್ಕೆ ಸುಂದರೇಶ್ ಬಾಬುರನ್ನು ನಿಯೋಜಿಸಿದ್ದು, ಅಧಿಕಾರ ವಹಿಸಿಕೊಳ್ಳಬೇಕಿದೆ.