ಕೊಪ್ಪಳ: ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಕೋವಿಡ್ ನಡುವೆಯೂ ಭಾನುವಾರ ಅಗ್ನಿಕುಂಡ ಹಾಯುವ ಕಾರ್ಯಕ್ರಮ ನಡೆಯಿತು. ಇದರಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದು, ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ.
ಈ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿದೆ.ಕರೊನಾ ಹಿನ್ನೆಲೆಯಲ್ಲಿ ಜಾತ್ರೆ ರದ್ದುಪಡಿಸಿ ಜಿಲ್ಲಾಡಳಿತ ಆದೇಶಿಸಿದೆ. ದೇವಾಲಯದ ಆವರಣದಲ್ಲಿ ಸಾರ್ವಜನಿಕರ ನಿರ್ಬಂಧದೊಂದಿಗೆ ಧಾರ್ಮಿಕ ಕಾರ್ಯಕ್ರಮ ನಡೆಸಲು ಕಚೇರಿ ಸಿಬ್ಬಂದಿ ಹಾಗೂ ಅರ್ಚಕರು ಮತ್ತು ಕಮಿಟಿ ಸದಸ್ಯರು ಅನುಮತಿಸಿದ್ದಾರೆ.