ಕೊಪ್ಪಳ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬಿತ್ತನೆಗೆ ಅವಶ್ಯವಿರುವ ವಿವಿಧ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆ ಮಾಡಲಾಗುತ್ತಿದೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್.ತಿಳಿಸಿದ್ದಾರೆ.
ಪ್ರಸಕ್ತ ಹಿಂಗಾರು ಹಂಗಾಮು ಪ್ರಾರಂಭವಾಗಿದ್ದು, ಹಿಂಗಾರು ಹಂಗಾಮಿನಲ್ಲಿ ಬೇಕಾಗುವ ಕಡಲೆ, ಜೋಳ, ಗೋಧಿ, ಸೂರ್ಯಕಾಂತಿ ಹಾಗೂ ಕುಸುಬೆ ಬಿತ್ತನೆ ಬೀಜ ಈಗಾಗಲೇ ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ರಿಯಾಯಿತಿ ದರದಲ್ಲಿ ರೈತ ಸಂಪರ್ಕ ಕೇಂದ್ರಗಳ ಮುಖಾಂತರ ವಿತರಣೆ ಮಾಡಲಾಗುತ್ತಿದೆ.
ಬಿತ್ತನೆ ಕಾರ್ಯಕ್ಕೆ ಹಾಗೂ ಬೆಳೆಗಳಿಗೆ ಬೇಕಾಗುವ ರಸಗೊಬ್ಬರವು ಜಿಲ್ಲೆಯಲ್ಲಿ ದಾಸ್ತಾನಿವಿದ್ದು, 13,487 ಟನ್ ಯೂರಿಯಾ, 1988 ಟನ್ ಡಿಎಪಿ, 20,236 ಟನ್ ಕಾಂಪ್ಲೆಕ್ಸ್, 2,696 ಟನ್ ಎಂಓಪಿ ಸೇರಿ ಒಟ್ಟು 38,936 ಮೆಟ್ರಿಕ್ ಟನ್ ರಸಗೊಬ್ಬರ ಜಿಲ್ಲೆಯಲ್ಲಿ ಲಭ್ಯವಿದ್ದು, ರೈತರು ಇದರ ಸದಪಯೋಗ ಪಡೆದುಕೊಳ್ಳಬೇಕು. ಬಿತ್ತನೆ ಬೀಜ ಪಡೆಯಲು ಎಫ್.ಐ.ಡಿ ಸಂಖ್ಯೆ ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದ್ದಾರೆ.