ಜಿಲ್ಲೆ

ಕೊಪ್ಪಳಕ್ಕೆ ಕನ್ನಡ ಜ್ಯೋತಿ ರಥಯಾತ್ರೆ ಆಗಮನ

ಕೊಪ್ಪಳ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡ ಜ್ಯೋತಿ ರಥ ಯಾತ್ರೆಯು ಶುಕ್ರವಾರ ಕೊಪ್ಪಳಕ್ಕೆ‌‌ ಆಗಮಿಸಿದ್ದು, ಜಿಲ್ಲಾಡಳಿತದಿಂದ ಕನ್ನಡ ರಥವನ್ನು ಬರಮಾಡಿಕೊಂಡು ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಲೀನ ಅತುಲ್ ನಾಡ ದೇವತೆ ತಾಯಿ ಭುವನೇಶ್ವರಿ ಪುತಳಿಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಪನೆ ಮಾಡಿದರು. ಬಳಿಕ ಕನ್ನಡ ಬಾವುಟ ಹಿಡಿದು ರಥ ಯಾತ್ರೆಗೆ ಚಾಲನೆ ನೀಡಿದರು.ಇದೆ ವೇಳೆ ತಾಯಿ ಭುವನೇಶ್ವರಿಗೆ ಜೈ, ನಾಡ ದೇವತೆಗೆ ಜೈ, ಕರುನಾಡಿಗೆ ಜೈ, ಕನ್ನಡ ಸಾಹಿತ್ಯ ಪರಿಷತ್ತಿಗೆ ಜೈ ಸೇರಿದಂತೆ ಕನ್ನಡ ಹಾಗೂ ಕನ್ನಡ ನಾಡಿನ ಪರ ಘೋಷಣೆಗಳು ಮೊಳಗಿದವು.

ಡೊಳ್ಳು ಕುಣಿತವು ಕನ್ನಡ ಜ್ಯೋತಿ ರಥ ಯಾತ್ರೆಗೆ ಮೆರಗು ಹೆಚ್ಚಿಸಿತು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಕೊಪ್ಪಳ ತಹಸೀಲ್ದಾರ ವಿಠ್ಠಲ ಚೌಗಲಾ, ತಾಪಂ ಇಒ ದುಂಡಪ್ಪ ದುರಾದಿ, ಸಾಹಿತಿ ಡಾ.ಮಹಾಂತೇಶ್ ಮಲ್ಲನಗೌಡರ್, ಕಸಾಪ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳಿದ್ದರು.