ಜಿಲ್ಲೆ

ಅಗತ್ಯ ವಸ್ತುಗಳ ಬೆಲೆ ಇಳಿಸಿ; ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಜೆಡಿಎಸ್‌ನಿಂದ ಮನವಿ


ಕೊಪ್ಪಳ: ಲಾಕ್‌ಡೌನ್‌ನಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಇಂಧನ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಮತ್ತಷ್ಟು ಸಮಸ್ಯೆಯಾಗಿದೆ. ಕೂಡಲೇ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಮೂಲಕ ಸರ್ಕಾರಕ್ಕೆ ಜೆಡಿಎಸ್ ಮುಖಂಡರು ಮಂಗಳವಾರ ಮನವಿ ಸಲ್ಲಿಸಿದರು.

ಕರೊನಾ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್‌ಡೌನ್ ಹೇರಿತ್ತು. ಜನರಿಗೆ ಕೆಲಸವಿದಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಪೆಟ್ರೋಲ್, ಆದರೂ ಕೇಂದ್ರ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸದೆ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.

ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಕೂಡಲೇ ಇಳಿಕೆ ಮಾಡಬೇಕು. ಕರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಿಸಬೇಕೆಂದು ಒತ್ತಾಯಿಸಲಾಯಿತು.

ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ, ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ್, ವಕ್ತಾರ ಮೌನೇಶ ವಡ್ಡಟ್ಟಿ, ಮುಖಂಡರಾದ ಸಿ.ಎಂ.ಹಿರೇಮಠ, ಮಂಜುನಾಥ ಸೋರಟೂರು, ಬಸವರಾಜ ನಾಯಕ, ಅಯೂಬ್ ಅಡ್ಡೇವಾಲೆ, ಪ್ರಭಾಕರ ಬಡಿಗೇರ, ಪರಶುರಾಮ ಚಿಗರಿ, ಪವನ್ ಪಾಟೀಲ್, ಸಿದ್ದಪ್ಪ ಸಿಂದೋಗಿ, ದೇವೇಂದ್ರಗೌಡ ಜಿರ್ಲಿ ಮತ್ತು ಇತರರಿದ್ದರು.