ಜಿಲ್ಲೆ

ಕೊಪ್ಪಳದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

ಕೊಪ್ಪಳ: ಜಿಲ್ಲಾಡಳಿತ ಗುನ್ನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಪಾಲಿಟೆಕ್ನಿಕಲ್​ ಕಾಲೇಜ್​ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ನಡೆಸಲಾಯಿತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಮಾತನಾಡಿ, ಪ್ರತಿ ವರ್ಫಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ನಡೆಯುತ್ತದೆ. ಈ ವರ್ಫಿದ ಘೋಫಿವಾಕ್ಯ ಆತ್ಮಹತ್ಯೆಯ ನಿರೂಪಣೆಯನ್ನು ಬದಲಾಯಿಸೋಣ ಎಂಬುದಾಗಿದೆ. ಈ ಕಾರ್ಯಕ್ರಮದ ಉದ್ದೇಶ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಗಟ್ಟುವ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವುದಾಗಿದೆ ಎಂದು ತಿಳಿಸಿದರು.

ಆತ್ಮಹತ್ಯೆಯ ಘಟಣೆಗಳು ಬೆಳೆಯುತ್ತಿರುವ ಸಮಸ್ಯೆಯಾಗಿದೆ. ವರ್ಷದಿಂದ ವರ್ಷಕ್ಕೆ ಆಘಾತಕಾರಿ ಬೆಳವಣಿಗೆಯನ್ನು ಹೊಂದಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರಪಂಚದಲ್ಲಿ ಪ್ರತಿ 40 ಸೆಕೆಂಡ್​ಗಳಿಗೆ ಒಬ್ಬರಾದರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿ 15-29 ವರ್ಫಿ ವಯಸ್ಸಿನ ಜನರ ಸಾವಿಗೆ ಆತ್ಮಹತ್ಯೆ ಪ್ರಮುಖ ಕಾರಣವಾಗಿದೆ. ಬಿಡುವಿಲ್ಲದ ಜೀವನ ಶೈಲಿಯ ಕಾರಣದಿಂದ ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆ ಸಮಸ್ಯೆಗೆ ಮಾನಸಿಕ ರೋಗದ ತಜ್ಞರ ಬಳಿ ಭೇಟಿ ನೀಡಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

ಗುನ್ನಾಳ ಪಾ.ಆ.ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದಯಾನಂದಸ್ವಾಮಿ, ಕಾಲೇಜಿನ ಪ್ರಾಂಶುಪಾಲ ರೇವಣಸಿದ್ದಯ್ಯ ಮಾಲಗಿತ್ತಿ, ವಿಭಾಗಾಧಿಕಾರಿಗಳಾದ ಲಕ್ಷ$್ಮಣ ಕುಂಟೆ ಹಾಗೂ ಚಂದ್ರಶೇಖರ ಸುಂಕದ, ಕಚೇರಿ ಅಧೀಕ್ಷಕರಾದ ಕರಿಬಸಪ್ಪ, ಸಹ-ಉಪನ್ಯಾಸಕರು ಇದ್ದರು.