ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಮ್ಮಿಕೊಳ್ಳುವ ಸಂಬಂಧ ಶುಕ್ರವಾರ ಕೊಪ್ಪಳದಲ್ಲಿ ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಎಡಿಸಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಡಿಯುಡಿಸಿ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್​, ಡಿಡಿಪಿಯು ಜಗದೀಶ್​ ಜಿ.ಎಚ್​., ಸಮಾಜ ಕಾಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜು ತಳವಾರ, ಡಿಡಿಪಿಐ ಶ್ರೀಶೈಲ ಬಿರಾದಾರ ಇದ್ದರು. 
ಜಿಲ್ಲೆ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಿದ್ಧರಾಗಿ

ಕೊಪ್ಪಳ: ಜಿಲ್ಲೆಯಲ್ಲಿ ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ. ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸುವಂತೆ ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಎಲ್ಲ ಇಲಾಖೆಗಳು ಸಕ್ರಿಯವಾಗಿ ಭಾಗವಹಿಸಿ. ಕುಕನೂರು ತಾಲೂಕಿನ ಸೋಂಪುರ ಹೆದ್ದಾರಿಯಿಂದ ಮುನಿರಾಬಾದ್​ ಡ್ಯಾಂ ಎನ್​ಎಚ್​ವರೆಗೆ 60,000 ಜನರನ್ನು ಒಳಗೊಂಡ ಮಾನವ ಸರಪಳಿ ರಚಿಸಲು ಕ್ರಮ ಜರುಗಿಸಿ. ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಜಾಪ್ರಭುತ್ವ ದಿನದ ಮಹತ್ವ ಬಿಂಬಿಸುವ ಚಿತ್ರ, ಸಮವಿಧಾನ ಪುಸ್ತಕದ ಚಿತ್ರಣ ಬಿಂಬಿಸುವಂತಿರಲಿ. ಚಿತ್ರಕಲಾ ಶಿಕ್ಷಕರಿಂದ ಈ ಕಾರ್ಯ ಮಾಡಿಸಿ. ಅಶೋಕ ವೃತ್ತದಲ್ಲಿ ಸಂವಿಧಾನ ಪ್ರಸ್ತಾವನೆ ಬೋಧನೆಗೆ ವೇದಿಕೆ ನಿರ್ಮಿಸಿ. ಪ್ರತಿ ಹಂತದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪುರೇಷೆ ರೂಪಿಸಿ. ಆಯಾ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿ ಅಚ್ಚುಕಟ್ಟಾಗಿ ನಿಭಾಯಿಸಿ ಎಂದು ತಾಕೀತು ಮಾಡಿದರು.

ಎಡಿಸಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಡಿಯುಡಿಸಿ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್​, ಡಿಡಿಪಿಯು ಜಗದೀಶ್​ ಜಿ.ಎಚ್​., ಸಮಾಜ ಕಾಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜು ತಳವಾರ, ಡಿಡಿಪಿಐ ಶ್ರೀಶೈಲ ಬಿರಾದಾರ, ತಹಸೀಲ್ದಾರ್​ ವಿಠ್ಠಲ ಚೌಗಲಾ, ತಾಪಂ ಇಒ ದುಂಡಪ್ಪ ತುರಾದಿ ಇತರರಿದ್ದರು.