ಯಲಬುರ್ಗಾದ ಶ್ರೀಧರ ಮುರುಡಿ ಮಠದ ಪೀಠಾಧಿಪತಿ ಶ್ರೀ ಬಸವಲಿಂಗೇಶ್ವರ ಸ್ವಾಮೀಜಿ ಯೋಗಾಭ್ಯಾಸದಲ್ಲಿ ತೊಡಗಿರುವುದು. 
ಕೊಪ್ಪಳ

ಮಾನಸಿಕ ಪ್ರಯೋಜನಗಳ ಉತ್ತಮ ಮಾರ್ಗದರ್ಶಿ

ಶಾಮಸುಂದರ್ ಕೊಪ್ಪಳಕರ್

ಪ್ರಮುಖ ಮುಖ್ಯಾಂಶಗಳು

  • ಬಸವಲಿಂಗೇಶ್ವರ ಸ್ವಾಮೀಜಿಯಿಂದ ಉಚಿತ ತರಬೇತಿ
ಯಲಬುರ್ಗಾ: ಪಟ್ಟಣದ ಶ್ರೀಧರ ಮುರುಡಿ ಮಠದ ಪೀಠಾಧಿಪತಿ ಶ್ರೀ ಬಸವಲಿಂಗೇಶ್ವರ ಸ್ವಾಮೀಜಿ ಕಳೆದ ಎರಡು ದಶಕಗಳಿಂದ ನಿರಂತರ ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಜನರಿಗೆ ಸಾರುತ್ತಿದ್ದಾರೆ.
ಕಳೆದ 20 ವರ್ಷಗಳಿಂದ ಯೋಗಾಭ್ಯಾಸವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿಸಿಕೊಂಡು ಶಾರೀರಿಕ ಹಾಗೂ ಮಾನಸಿಕ ಪ್ರಯೋಜನಗಳ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಬಸವಲಿಂಗೇಶ್ವರ ಯೋಗ ತರಬೇತಿ ಕೇಂದ್ರ ಸ್ಥಾಪಿಸಿ ಪ್ರತಿದಿನ ಉಚಿತ ಯೋಗ ತರಬೇತಿ ನೀಡುತ್ತಿದ್ದು, ಜನರಿಗೆ ಆರೋಗ್ಯಕರ ಬದುಕಿನ ಮಾರ್ಗದರ್ಶನ ಮಾಡುತ್ತಿದ್ದಾರೆ.
ಸ್ವಾಮೀಜಿ ಯೋಗದ ಜತೆಗೆ ಸಾಮಾಜಿಕ ಹಾಗೂ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯರಾಗಿದ್ದಾರೆ. ಮಠದ ಆವರಣದಲ್ಲಿ ಗೋಶಾಲೆ ಸ್ಥಾಪಿಸಿ ಗೋಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಿದ್ದು ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಯೋಗ ಕ್ಷೇತ್ರದಲ್ಲಿ ಸ್ವಾಮೀಜಿ ಸಲ್ಲಿಸಿರುವ ವಿಶಿಷ್ಟ ಸೇವೆ ಹಾಗೂ ಸಾಧನೆ ಗುರುತಿಸಿ ರಾಜ್ಯ ಮತ್ತು ಅಂತಾರಾಜ್ಯ ಮಟ್ಟದ ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ. ಯೋಗವನ್ನು ಆರೋಗ್ಯ, ಆತ್ಮಶಕ್ತಿ ಮತ್ತು ಜೀವನ ಮೌಲ್ಯ ಬೆಳೆಸುವ ಸಾಧನವಾಗಿ ಪರಿಗಣಿಸಿರುವ ಸ್ವಾಮೀಜಿ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ.
"

ಯೋಗ ದೇಹದ ಆರೋಗ್ಯ ಮಾತ್ರವಲ್ಲ, ಮನಸ್ಸಿನ ನೆಮ್ಮದಿ ಮತ್ತು ಆತ್ಮವಿಶ್ವಾಸ ಹೆಚ್ಚಿಸುವ ಉತ್ತಮ ಪದ್ಧತಿ. ಪ್ರತಿಯೊಬ್ಬರೂ ಪ್ರತಿದಿನ ಸ್ವಲ್ಪ ಸಮಯ ಯೋಗಕ್ಕೆ ಮೀಸಲಿಟ್ಟರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ.

— ಶ್ರೀ ಬಸವಲಿಂಗೇಶ್ವರ ಸ್ವಾಮೀಜಿ ಶ್ರೀಧರ ಮುರುಡಿ ಮಠ