ಎಡಿಸಿ ಸಿದ್ರಾಮೇಶ್ವರ 
ಕೊಪ್ಪಳ

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ

ಪ್ರಮುಖ ಮುಖ್ಯಾಂಶಗಳು

  • ಎಡಿಸಿ ಸಿದ್ರಾಮೇಶ್ವರ ಹೇಳಿಕೆ
ಕೊಪ್ಪಳ : ಫೆಬ್ರವರಿ 23 ರಂದು ಜಿಲ್ಲಾ ಕೇಂದ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸಮಾಜದ ಮುಖಂಡರ ಕೋರಿಕೆಯ ಮೇರೆಗೆ ಕೊಪ್ಪಳ ಜಿಲ್ಲಾ ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ಫೆ.19ರ ಬದಲಿಗೆ ಫೆ. 23 ರಂದು ಆಚರಿಸಲಾಗುವುದು. ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪೂಜೆ, ಛತ್ರಪತಿ ಶಿವಾಜಿ ಕುರಿತು ವಿಶೇಫಿ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿದೆ. ವೇದಿಕೆ ಕಾರ್ಯಕ್ರಮದ ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆಯು ಸಾಹಿತ್ಯ ಭವನದಿಂದ ಪ್ರಾರಂಭಗೊಂಡು ಜವಾಹರ ರಸ್ತೆ ಮೂಲಕ ಗಡಿಯಾರ ಕಂಬದ ಹತ್ತಿರದ ಕೋಟೆ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ವೃತ್ತದವರೆಗೆ ಜರುಗಲಿದೆ ಎಂದು ಅವರು ತಿಳಿಸಿದರು.
ಸಮಾರಂಭ ದಿನದಂದು, ಮೆರವಣಿಗೆ ಮಾರ್ಗದ ಸ್ವಚ್ಛತೆ, ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಒದಗಿಸಬೇಕು. ಜಿಲ್ಲಾ ಮಟ್ಟದ ಜಯಂತಿ ಆಚರಣೆ ಕಾರ್ಯಕ್ರಮಕ್ಕಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಯಂತಿ ಕಾರ್ಯಕ್ರಮ ಯಶಸ್ವಿಗೆ ಸಮಾಜದ ಎಲ್ಲಾ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ಸಮಾಜದ ಮುಖಂಡರಾದ ಮಾರುತಿ ಎನ್​., ಉಮೇಶ ಸುರ್ವೆ, ವಿಶ್ವನಾಥ ಅರಿಕೇರಿ, ಗವಿಸಿದ್ದಪ್ಪ ನಿಂಬಾಲ್ಕರ, ರಮೇಶ ಘೋರ್ಪಡೆ, ಹನುಮಂತ ಕಾರಟಗಿ, ಕೃಫಿ್ಣಾಜಿ ಬೋಸಲೆ ಸೇರಿದಂತೆ ಮತ್ತಿತರರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.