ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಗುರುವಾರ ಕೊಪ್ಪಳದಲ್ಲಿ ಎಡಿಸಿ ಸಿದ್ರಾಮೇಶ್ವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಡಿಡಿಪಿಯು ಜಗದೀಶ್​ ಜಿ.ಎಚ್​., ಪ್ರವಾಸೋದ್ಯಮ ಸಹಾಯಕ ನಿರ್ದೇಶಕ ನಾಗರಾಜ ಡಿ., ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ, ಕನ್ನಡ ಮತ್ತು ಸಂಸತಿ ಸಹಾಯಕ ನಿರ್ದೇಶಕ ಕರ್ಣಕುಮಾರ್​, ಸಮುದಾಯ ಮುಖಂಡರಾದ ಸೋಮಣ್ಣ, ಹುಲುಗಪ್ಪ ಬಾರಕೇರ್​, ರಮೇಶ್​ ಕಬ್ಬೇರ್​, ರಾಜು ಕಲಿಗಾರ ಇದ್ದರು.  
ಕೊಪ್ಪಳ

ಚೌಡಯ್ಯ ಜಯಂತಿ 21ಕ್ಕೆ

ಪ್ರಮುಖ ಮುಖ್ಯಾಂಶಗಳು

  • ಎಡಿಸಿ ಸಿದ್ರಾಮೇಶ್ವರ ಹೇಳಿಕೆ
ಕೊಪ್ಪಳ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಜ.21ರಂದು ಜಿಲ್ಲಾ ಕೇಂದ್ರದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಅಂದು ಬೆಳಗ್ಗೆ 8.30ಕ್ಕೆ ನಗರದ ಸಿರಸಪ್ಪಯ್ಯನ ಮಠದಿಂದ ಸಾಹಿತ್ಯ ಭವನದವರೆಗೆ ಚೌಡಯ್ಯ ಭಾವಚಿತ್ರ ಮೆರವಣಿಗೆ ಇರಲಿದೆ. ಬೆಳಗ್ಗೆ 10.30 ಗಂಟೆಗೆ ಸಾಹಿತ್ಯ ಭನವದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ವಿಶೇಷ ಉಪನ್ಯಾಸ ಹಮ್ಮಿಕೊಂಡು ಚೌಡಯ್ಯ ವಿಚಾರಗಳನ್ನು ಜನತೆಗೆ ತಿಳಿಸಲಾಗುವುದು. ಶಿಷ್ಠಾಚಾರದಂತೆ ಗಣ್ಯರನ್ನು ಆಹ್ವಾನಿಸಿ. ಎಲ್ಲ ಅಧಿಕಾರಿಗಳು ನಿಮ್ಮ ಜವಾಬ್ದಾರಿ ನಿರ್ವಹಿಸಿ. ನಗರ ಸ್ವಚ್ಛತೆ, ಜನರಿಗೆ ಕುಡಿವ ನೀರು ಇನ್ನಿತರ ಸೌಲಭ್ಯ ಕಲ್ಪಿಸಿ. ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
ಡಿಡಿಪಿಯು ಜಗದೀಶ್​ ಜಿ.ಎಚ್​., ಪ್ರವಾಸೋದ್ಯಮ ಸಹಾಯಕ ನಿರ್ದೇಶಕ ನಾಗರಾಜ ಡಿ., ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ, ಕನ್ನಡ ಮತ್ತು ಸಂಸತಿ ಸಹಾಯಕ ನಿರ್ದೇಶಕ ಕರ್ಣಕುಮಾರ್​, ಸಮುದಾಯ ಮುಖಂಡರಾದ ಸೋಮಣ್ಣ, ಹುಲುಗಪ್ಪ ಬಾರಕೇರ್​, ರಮೇಶ್​ ಕಬ್ಬೇರ್​, ರಾಜು ಕಲಿಗಾರ, ಉದಯ ಕಬ್ಬೇರ್​, ಶಿವಪ್ಪ ಕಬ್ಬೇರ್​, ಪ್ರವಿಣ, ಹನುಮಂತಪ್ಪ ಗಿಡ್ಡಾಲಿ ಇತರರಿದ್ದರು.