ಅಳವಂಡಿಯಲ್ಲಿ ಹಮ್ಮಿಕೊಂಡಿದ್ದ ವಿಶೇಷ ಗ್ರಾಮ ಸಭೆಯಲ್ಲಿ ಪಿಡಿಒ ಕೊಟ್ರಪ್ಪ ಅಂಗಡಿ ಮಾತನಾಡಿದರು. ಪ್ರಮುಖರಾದ ದೇವೇಂದ್ರರೆಡ್ಡಿ, ದಾವಲಸಾಬ್, ಸುರೇಶ ಪೂಜಾರ, ಮಾರುತಿ, ಗೀತಾ, ವಿರೂಪಾಕ್ಷಪ್ಪ, ವೀರಭಸಯ್ಯ, ಅಂದಪ್ಪ, ಅಹ್ಮದಸಾಬ್, ಹನುಮಂತಪ್ಪ, ಆನಂದ, ಬಾಬು, ಜಯಪ್ಪ, ಮಾಬೂಸಾಬ್ ಇತರರಿದ್ದರು.
ಪ್ರಜಾಪ್ರಭುತ್ವ ಬಲಪಡಿಸುವ ಉದ್ದೇಶ
ಅಳವಂಡಿ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಬುನಾದಿಯಾಗಿವೆ ಎಂದು ಪಿಡಿಒ ಕೊಟ್ರಪ್ಪ ಅಂಗಡಿ ಹೇಳಿದರು.
ಗ್ರಾಮದ ನರೇಗಾ ಕಾಮಗಾರಿ ಸ್ಥಳದಲ್ಲಿ ಜಿಪಂ, ತಾಪಂ, ಗ್ರಾಪಂನಿಂದ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ನಿಮಿತ್ತ ಈಚೆಗೆ ಹಮ್ಮಿಕೊಂಡಿದ್ದ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದರು.
ಪ್ರಜಾಪ್ರಭುತ್ವವನ್ನು ತಳಮಟ್ಟದಲ್ಲಿ ಬಲಪಡಿಸುವ ಜತೆಗೆ ಸ್ವಯಂ ಆಡಳಿತದ ಅಧಿಕಾರ ನೀಡುವುದು ಯೋಜನೆ ಉದ್ದೇಶವಾಗಿದೆ. 1993 ಏ.24ರಂದು ಸಂವಿಧಾನದ 73ನೇ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಸಂವಿಧಾನಿಕ ಮಾನ್ಯತೆ ದೊರೆತ ನೆನಪಿಗಾಗಿ ಈ ದಿನ ಆಚರಿಸಲಾಗುತ್ತದೆ ಎಂದರು.