ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಎಐಎಂಎಸ್ಎಸ್ ಜಿಲ್ಲಾ ಸಂಘಟನಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರಗೆ ಮನವಿ ಸಲ್ಲಿಸಲಾಯಿತು. ಎಐಎಂಎಸ್ಎಸ್ ಜಿಲ್ಲಾ ಅಧ್ಯಕ್ಷೆ ಮಂಜುಳಾ ಮಜ್ಜಿಗಿ, ಪದಾಧಿಕಾರಿಗಳಾದ ಶಾರದಾ ಗಡ್ಡಿ, ಪ್ರಭಾವತಿ ಇದ್ದರು.
ಕೊಪ್ಪಳ : ಪಶ್ಚಿಮ ಬಂಗಾಳ ಹಾಗೂ ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ, ಆರೋಪಿಗಳಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸತಿಕ ಸಂಘಟನೆ ಜಿಲ್ಲಾ ಸಂಘಟನಾ ಸಮಿತಿ ಶುಕ್ರವಾರ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿತು.
ಇಂತಹ ಘಟನೆಗಳು ಇಡೀ ದೇಶವನ್ನು ಬೆಚ್ಚೀಬಿಳಿಸಿದ್ದು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಕುರಿತು ಗಂಭೀರ ಆತಂಕ ಮೂಡಿಸಿವೆ. ಅತ್ಯಾಚಾರ ಪ್ರಕರಣಗಳಲ್ಲಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವ ಮೂಲಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಸಮಾಜದಲ್ಲಿ ಆತಂಕದ ವಾತಾವರಣ ನಿಮಾರ್ಣವಾಗಿದೆ. ಇಂತಹ ಅಪರಾಧಗಳನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಾಮಾಜಿಕ ಮಾಧ್ಯಮಗಳ ದುರ್ಬಳಕೆ, ಅಶ್ಲೀಲ ವಿಷಯಗಳ ಸುಲಭ ಲಭ್ಯತೆ, ಮದ್ಯ ಮತ್ತು ಮಾದಕ ವಸ್ತುಗಳ ದುರುಪಯೋಗ ಸೇರಿದಂತೆ ವಿವಿಧ ಸಾಮಾಜಿಕ ಸಮಸ್ಯೆಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೇಶದಾದ್ಯಂತ ಮಹಿಳೆಯರು ಹಾಗೂ ಹೆಣ್ಣುಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ನೀತಿಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ.
ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಿಂಸಾಚಾರದ ವಿರುದ್ಧ ಸಮಾಜದ ಎಲ್ಲ ವರ್ಗದ ಜನರು ಜಾಗೃತರಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಎಐಎಂಎಸ್ಎಸ್ ಕರೆ ನೀಡಿದೆ.
ಎಐಎಂಎಸ್ಎಸ್ ಜಿಲ್ಲಾ ಅಧ್ಯಕ್ಷೆ ಮಂಜುಳಾ ಮಜ್ಜಿಗಿ, ಪದಾಧಿಕಾರಿಗಳಾದ ಶಾರದಾ ಗಡ್ಡಿ, ಪ್ರಭಾವತಿ ಇದ್ದರು.