ಕೊಪ್ಪಳದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್​.ಅಂಬೇಡ್ಕರ್​ ಜಯಂತಿಯನ್ನು ಎಂಪಿ ರಾಜಶೇಖರ ಹಿಟ್ನಾಳ ಉದ್ಘಾಟಿಸಿದರು. ವಿಪ ಸದಸ್ಯೆ ಹೇಮಲತಾ ನಾಯಕ, ಡಿಸಿ ಡಾ.ಸುರೇಶ ಬಿ.ಇಟ್ನಾಳ, ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿ ಇದ್ದರು.  
ಕೊಪ್ಪಳ

ಅಂಬೇಡ್ಕರ್​ ಸರ್ವರಿಗೂ ಶಕ್ತಿ

ಪ್ರಮುಖ ಮುಖ್ಯಾಂಶಗಳು

  • ಸಂಸದ ರಾಜಶೇಖರ ಹಿಟ್ನಾಳ ಬಣ್ಣನೆ
ಕೊಪ್ಪಳ : ಸರ್ವರಿಗೂ ಸಮಾನ ಅವಕಾಶ ಸಿಗುವ ವ್ಯವಸ್ಥೆಯನ್ನು ಸಂವಿಧಾನದ ಮೂಲಕ ಕಲ್ಪಿಸಿಕೊಟ್ಟ ಬಾಬಾ ಸಾಹೇಬ್​ ಅಂಬೇಡ್ಕರ್​ ಸರ್ವರಿಗೂ ಶಕ್ತಿಯಾಗಿದ್ದಾರೆ ಎಂದು ಸಂಸದ ರಾಜಶೇಖರ ಹಿಟ್ನಾಳ ಬಣ್ಣಿಸಿದರು. 
ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್​.ಅಂಬೇಡ್ಕರ್​ ಜಯಂತಿ ಉದ್ಘಾಟಿಸಿ ಮಾತನಾಡಿದರು. 
ಅಸಮಾನತೆಯಿಂದ ಕೂಡಿದ್ದ ದೇಶದಲ್ಲಿ ಸಮಾನತೆಯನ್ನು ತಂದರು. ಮೇಲು-&ಕೀಳು, ಜಾತಿ ವ್ಯವಸ್ಥೆ ಮತ್ತು ಅಸ್ಪ-----ೃಶ್ಯತೆ ನಿವಾರಿಸಿದರು. ಶಿಕ್ಷಣ, ಸಂಘಟನೆ, ಹೋರಾಟಗಳ ಮೂಲಕ ದೇಶದಲ್ಲಿ ಸಮ ಸಮಾಜವನ್ನು ನಿರ್ಮಿಸಲು ಮಾರ್ಗ ಹಾಕಿಕೊಟ್ಟರು. ಹಿಂದುಳಿದವರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರಿಗೆ ವಿಶೇಷ ಸೌಲಭ್ಯ ಕಲ್ಪಿಸಿದರು ಎಂದರು. 
ಡಿಸಿ ಡಾ.ಸುರೇಶ ಬಿ.ಇಟ್ನಾಳ ಮಾತನಾಡಿ, ಬ್ರಿಟಿಷ್​ ದಾಸ್ಯದಿಂದ ಬಿಡುಗಡೆ ಹೊಂದಿದ ಮೇಲೆ ನಮಗೆ ಸ್ವಾತಂತ್ರ$್ಯ ಸಂವಿಧಾನ ಇರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಹೊಂದುವಂಥ ಸಂವಿಧಾನವನ್ನು ಅಂಬೇಡ್ಕರ್​ ನಮಗೆಲ್ಲ ನೀಡಿದ್ದಾರೆ. ಕರಡು ಸಮಿತಿ ಅಧ್ಯಕ್ಷರಾಗಿ ಸಾಕಷ್ಟು ಅಧ್ಯಯನ ನಡೆಸಿ ನಮಗೆ ಸಂವಿಧಾನ ನೀಡಿದ್ದಾರೆಂದು ತಿಳಿಸಿದರು. 
ಕಂಪ್ಲಿ ತಾಲೂಕಿನ ರಾಮಸಾಗರ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸುಗ್ಗೇನಹಳ್ಳಿ ರಮೇಶ ವಿಶೇಷ ಉಪನ್ಯಾಸ ನೀಡಿದರು. ವಿಪ ಸದಸ್ಯೆ ಹೇಮಲತಾ ನಾಯಕ ಮಾತನಾಡಿದರು. 
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ವಾಚಿಸಲಾಯಿತು. ಮಂಜುನಾಥ ಅಳ್ಳಳ್ಳಿ ಮತ್ತು ಸಂಗಡಿಗರು ಕ್ರಾಂತಿ ಗೀತೆ ಹಾಡಿದರು. ಡಿಸಿ ಡಾ.ಸುರೇಶ ಬಿ.ಇಟ್ನಾಳ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕು ಮುನ್ನಾ ನಗರಾದ್ಯಂತ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.
ಡಿಎ್​ಒ ನಿರ್ಮಲಾ, ಡಾ. ಬಿ.ಆರ್​.ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಡಿಎಂ ಪುಷ್ಪಲತಾ, ಡಿಡಿಪಿಯು ಜಗದೀಶ ಜಿ.ಎಚ್​., ಸಮುದಾಯ ಮುಖಂಡರಾದ ಗೂಳಪ್ಪ ಹಲಗೇರಿ, ಗಾಳೆಪ್ಪ ಪೂಜಾರ, ಮುತ್ತುರಾಜ ಕುಷ್ಟಗಿ, ಯಲ್ಲಪ್ಪ ಬಳಗಾನೂರ, ಸಿದ್ರಾಮ ಹೊಸಮನಿ, ಚನ್ನಬಸಪ್ಪ ಹೊಳೆಯಪ್ಪನವರ, ಗವಿಸಿದ್ದಪ್ಪ ಗಿಣಿಗೇರಿ, ಸಿದ್ದು ಮ್ಯಾಗೇರಿ ಇತರರಿದ್ದರು.