ಕನಕಗಿರಿ ತಾಲೂಕಿನ ಚಿಕ್ಕಮಾದಿನಾಳ ಗ್ರಾಮದ ಅರಣ್ಯದಲ್ಲಿ ಬೇಟೆಯಾಡಲು ಬಲೆಗಳನ್ನು ಹಾಕಿದ್ದ ಆರೋಪಿಗಳು. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಡಿ.ಸುಲೇಮಾನ್, ಗಸ್ತು ಅರಣ್ಯ ಪಾಲಕರಾದ ಶಿವಶರಣ ಕೋಳಿ, ಮಹಾಂತೇಶ್ ಕುಂಬಾರ ಹಾಗೂ ಸಿಬ್ಬಂದಿ ಇದ್ದರು. 
ಕೊಪ್ಪಳ

ಬೇಟೆಗೆ ಬಲೆ ಹಾಕಿದ್ದವರ ಬಂಧನ

ಪ್ರಮುಖ ಮುಖ್ಯಾಂಶಗಳು

  • ಅರಣ್ಯ ಸಂರಕ್ಷಣಾಧಿಕಾರಿ ಎ.ಎಚ್.ಮುಲ್ಲಾ ಮಾರ್ಗದರ್ಶನದಲ್ಲಿ ದಾಳಿ
  • ಕನಕಗಿರಿ ಚಿಕ್ಕಮಾದಿನಾಳ ಬೇಟೆಯಾಡಲು ಬಲೆ
ಕನಕಗಿರಿ: ತಾಲೂಕಿನ ಚಿಕ್ಕಮಾದಿನಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಲೆ ಹಾಕಿದ್ದ ಇಬ್ಬರನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕನಕಗಿರಿ ಮೂಲದ ಗೂಡುಸಾಬ್ ಸಂತ್ರಾಸ್ ಹಾಗೂ ರಾಜಾಸಾಬ್ ಸಂತ್ರಾಸ್ ಬಂಧಿತರು. ಚಿಕ್ಕ ಮಾದಿನಾಳ ಅರಣ್ಯ ವ್ಯಾಪ್ತಿಯಲ್ಲಿ ಮೊಲ ಬೇಟೆಯಾಡಲು ಈ ಬಲೆಗಳನ್ನು ಹಾಕಿದ್ದಾರೆನ್ನಲಾಗಿದ್ದು, ಆರೋಪಿಗಳಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಕೊಪ್ಪಳ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಅನುಪಮಾ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಚ್.ಮುಲ್ಲಾ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಡಿ.ಸುಲೇಮಾನ್, ಗಸ್ತು ಅರಣ್ಯ ಪಾಲಕರಾದ ಶಿವಶರಣ ಕೋಳಿ, ಮಹಾಂತೇಶ್ ಕುಂಬಾರ ಸೇರಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು ಎಂದು ವಲಯ ಅರಣ್ಯಾಧಿಕಾರಿ ಬಸವರಾಜ ಎಂ.ಪೂಜಾರಿ ತಿಳಿಸಿದ್ದಾರೆ.