ಕೊಪ್ಪಳದಲ್ಲಿ ಮಿದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಅಪಸ್ಮಾರ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಎಎಸ್ಪಿ ಹೇಮಂತಕುವಾರ್, ಕಿಮ್ಸ್ ಬೋಧಕ ಆಸ್ಪತ್ರೆಯ ಎಂಡಿ ಡಾ.ವಿಜಯ್‌ಸಿಂಗ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವ್ಹಿ.ಪಿ.ಶಿವಾನಂದ ಇತರರಿದ್ದರು. 
ಕೊಪ್ಪಳ

ಮಿದುಳು ಆರೋಗ್ಯಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯ

ಕುರುವತ್ತಿ ಶ್ರೀಕಾಂತಪ್ಪ

ಪ್ರಮುಖ ಮುಖ್ಯಾಂಶಗಳು

  • ಎಎಸ್ಪಿ ಹೇಮಂತಕುವಾರ್ ಮಾಹಿತಿ ಜಾಗೃತಿ ಕಾರ್ಯಕ್ರಮ
  • ಹಾವು ಕಡಿತಕ್ಕೆ ಲಸಿಕೆ ಲಭ್ಯ
ಕೊಪ್ಪಳ: ಮಿದುಳು ಆರೋಗ್ಯಕ್ಕೆ ಲಭ್ಯವಿರುವ ಚಿಕಿತ್ಸೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುವಾರ್ ಸೂಚಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ ಅಧಿಕಾರಿಗಳ ಕಚೇರಿ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಕಾರ್ಯಾಲಯದ ಸಹಯೋಗದಲ್ಲಿ ಕರ್ನಾಟಕ ಮಿದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಅಪಸ್ಮಾರ ದಿನಾಚರಣೆ ನಿಮಿತ್ತ ಇತ್ತೀಚೆಗೆ ಹಮ್ಮಿಕೊಂಡಿದ್ದ ಜಾಗತಿ ಕಾರ್ಯಕ್ರಮದಲ್ಲಿ ವಾತನಾಡಿದರು. 
ಜಿಲ್ಲಾಸ್ಪತ್ರೆಯಲ್ಲಿ ಮಿದುಳು ಆರೋಗ್ಯಕ್ಕೆ ಸಂಬಂಧಿಸಿದ ಚಿಕಿತ್ಸೆ ಲಭ್ಯವಿದೆ. ಜತೆಗೆ ಹಾವು ಕಡಿತಕ್ಕೆ ಲಸಿಕೆ ನೀಡಲಾಗುತ್ತಿದ್ದು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಿ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ವಿಶೇಷ ಜಾಗತಿ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ಅರಿವು ಮೂಡಿಸಬೇಕು ಎಂದರು.
ಕಿಮ್ಸ್ ಬೋಧಕ ಆಸ್ಪತ್ರೆಯ ಎಂಡಿ ಡಾ.ವಿಜಯ್‌ಸಿಂಗ್ ವಾತನಾಡಿ, ಅಪಸ್ಮಾರ (ಮೂರ್ಛೆರೋಗ)ದ ಲಕ್ಷಣಗಳು, ಕಾರಣಗಳು, ಯಾವ ರೀತಿ ಗುರುತಿಸುವುದು, ಅಪಸ್ಮಾರಕ್ಕಿರುವ ಮಿಥ್ಯ ಹಾಗೂ ಸತ್ಯಗಳು, ಅಪಸ್ಮಾರ ಉಂಟಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದು ಹಾಗೂ ಔಷಧೋಪಚಾರದ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವ್ಹಿ.ಪಿ.ಶಿವಾನಂದ ವಾತನಾಡಿ, ಪ್ರಧಾನಿ ಮೋದಿ ಅವರು ಹೇಳಿದಂತೆ ಭಾರತ 2025ಕ್ಕೆ ಕ್ಷಯರೋಗ ಮುಕ್ತವಾಗಬೇಕು. ಅದರಂತೆ ನಮ್ಮ ಜಿಲ್ಲೆ ಮತ್ತು ರಾಜ್ಯವನ್ನು ಕ್ಷಯ ಮುಕ್ತವಾಗಿಸಲು ಹಾಗೂ ಬಾಲ್ಯ ವಿವಾಹ ತಡೆಗಟ್ಟಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು. ಕಭೀ ಕಾರ್ಯಕ್ರಮದ ಜಿಲ್ಲಾ ಸಂಯೋಜಕಿ ತೇಜಸ್ವಿನಿ, ಪೊಲೀಸ್ ಸಿಬ್ಬಂದಿ ಇದ್ದರು.