ಯಲಬುರ್ಗಾದಲ್ಲಿ ತಾತ್ಕಾಲಿಕ ತಹಸಿಲ್ ಕಚೇರಿಯನ್ನು ಡಿಸಿ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಉದ್ಘಾಟಿಸಿದರು. ತಹಸೀಲ್ದಾರ್ ಪ್ರಕಾಶ ನಾಶಿ, ಆಹಾರ ಇಲಾಖೆಯ ಉಪನಿರ್ದೇಶಕ ವಿಶ್ವನಾಥಗೌಡ, ಪ.ಪಂ ಮುಖ್ಯಾಧಿಕಾರಿ ನಾಗೇಶ್, ಕುಕನೂರು ತಹಸೀಲ್ದಾರ್ ಬಸವರಾಜ ಬೆಣ್ಣೆಶಿರೂರು ಇತರಿದ್ದರು.
- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಸಲಹೆ
- ಯಲಬುರ್ಗಾ ತಾತ್ಕಾಲಿಕ ತಹಸಿಲ್ ಕಚೇರಿ ಉದ್ಘಾಟನೆ
ಯಲಬುರ್ಗಾ: ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ, ಯಾವುದೇ ಕೆಲಸವನ್ನು ಅನಗತ್ಯವಾಗಿ ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅಧಿಕಾರಿಗಳಿಗೆ ಸೂಚಿಸಿದರು.
ತಾತ್ಕಾಲಿಕ ತಹಸಿಲ್ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಂದಾಯ ಇಲಾಖೆಯ ಸೇವೆಗಳು ಜನಸ್ನೇಹಿಯಾಗಿರಬೇಕು. ಸಾರ್ವಜನಿಕರನ್ನು ಸಣ್ಣಪುಟ್ಟ ಕೆಲಸಗಳಿಗೂ ಅಲೆದಾಡಿಸದೆ, ನಿಗದಿತ ಅವಧಿಯೊಳಗೆ ಸೇವೆಗಳನ್ನು ಒದಗಿಸಬೇಕು. ಯಲಬುರ್ಗಾದಲ್ಲಿ ನಿರ್ಮಾಣವಾಗಲಿರುವ ಪ್ರಜಾಸೌಧ ಕಟ್ಟಡದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ತಿಳಿಸಿದರು.
ತಹಸೀಲ್ದಾರ್ ಪ್ರಕಾಶ ನಾಶಿ ಮಾತನಾಡಿದರು. ಆಹಾರ ಇಲಾಖೆಯ ಉಪನಿರ್ದೇಶಕ ವಿಶ್ವನಾಥಗೌಡ, ಪ.ಪಂ ಮುಖ್ಯಾಧಿಕಾರಿ ನಾಗೇಶ್, ಕುಕನೂರು ತಹಸೀಲ್ದಾರ್ ಬಸವರಾಜ ಬೆಣ್ಣೆಶಿರೂರು, ಉಪ ತಹಸೀಲ್ದಾರ್ ಮಹಾಂತಗೌಡ, ವಿಜಯಕುಮಾರ ಗುಂಡೂರು, ಮಲ್ಲಿಕಾರ್ಜುನ ಶಾಸ್ತ್ರಿಮಠ, ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಮಂಜುನಾಥ ಮೇಟಿ, ಪಿ.ಬಿ. ಕುಂಬಾರ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಇತರರಿದ್ದರು.