ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ನಾಯಕರು ಸೋಮವಾರ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದರು. ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಪ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ನಡಹಳ್ಳಿ, ಜಿಲ್ಲಾಧ್ಯಕ್ಷ ಬಸವರಾಜ ದಢೇಸುಗೂರು, ಮಾಜಿ ಸಚಿವ ನಾಗಪ್ಪ ಸಾಲೋಣೀ, ಮಾಜಿ ಸಂಸದ ಶಿವರಾಮಗೌಡ ಇದ್ದರು.
- ಬಿಜೆಪಿ ನಾಯಕರ ಆಗ್ರಹ
- ಎತ್ತಿನ ಗಾಡಿಯಲ್ಲಿ ಪ್ರತಿಭಟನೆ
ಕೊಪ್ಪಳ: ಟಿಬಿ ಡ್ಯಾಂನಿಂದ ಎರಡನೇ ಬೆಳೆಗೆ ನೀರು ಹರಿಸುವಿಕೆ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ ಸೇರಿ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ನಾಯಕರು ಸೋಮವಾರ ಕೊಪ್ಪಳದಲ್ಲಿ ಎತ್ತಿನ ಗಾಡಿ ಬಳಸಿ ಪ್ರತಿಭಟನೆ ನಡೆಸಿದರು.
ಮೆಕ್ಕೆ ಜೋಳ ಬೆಳೆದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಿದ್ದಾರೆ. ಸಕಾಲಕ್ಕೆ ಬೆಂಬಲ ಬೆಲೆ ಘೋಷಿಸಲಿಲ್ಲ. ತಕ್ಷಣ ಕೇಂದ್ರ ಆರಂಭಿಸಬೇಕಿದೆ. ಸರ್ಕಾರ ಟಿಬಿ ಡ್ಯಾಂ ಗೇಟ್ ಸಕಾಲಕ್ಕೆ ಸರಿಪಡಿಸದೇ ಎರಡನೇ ಬೆಳೆಗೆ ನೀರು ಇಲ್ಲದಂತೆ ಮಾಡಿದೆ. ಗೊಬ್ಬರ ನೀಡಿದೆ ಮಣ್ಣು ತಿನ್ನಿಸಿದೆ. ಅಧಿಕಾರ ದಾಹಕ್ಕೆ ರೈತರನ್ನು ಮರೆತಿದೆ. ಸಿಎಂ&ಡಿಸಿಎಂ ಗದ್ದುಗೆ ಗುದ್ದಾಟದಲ್ಲಿ ನಿರತರಾಗಿದ್ದಾರೆಂದು ಆರೋಪಿಸಿದರು.
ಗ್ಯಾರಂಟಿ ಹೆಸರಿನಲ್ಲಿ ಅನ್ನದಾತರಿಗೆ ಅನ್ಯಾಯ ಮಾಡುತ್ತಿದೆ. ಉತ್ತಮ ಮಳೆ ಆಗಿ ಸಲು ಬಂದಿದೆ. ಆದರೆ, ದರ ಕುಸಿತದಿಂದ ಕೃಷಿಕರು ಕಂಗಾಲಾಗಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಸರ್ಕಾರ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಕಿಡಿ ಕಾರಿದರು. ರಸ್ತೆಗೆ ಮೆಕ್ಕೆಜೋಳ ಸುರಿದು ಆಕ್ರೋಶ ವ್ಯಕ್ತಪಡಿಸದರು.
ರೈತರ ಸಮಸ್ಯೆ ಹಾಗೂ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಸದನದಲ್ಲಿ ವಿಸತವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಪ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ನಡಹಳ್ಳಿ, ಜಿಲ್ಲಾಧ್ಯಕ್ಷ ಬಸವರಾಜ ದಢೇಸುಗೂರು, ಮಾಜಿ ಸಚಿವ ನಾಗಪ್ಪ ಸಾಲೋಣೀ, ಮಾಜಿ ಸಂಸದ ಶಿವರಾಮಗೌಡ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಜಿ.ವೀರಪ್ಪ, ಕೆ.ಶರಣಪ್ಪ, ಪ್ರಮುಖರಾದ ಡಾ.ಬಸವರಾಜ ಕ್ಯಾವಟರ್, ಚಂದ್ರಶೇಖರ್ಗೌಡ ಹಲಗೇರಿ, ನವೀನ್ ಗುಳಗಣ್ಣವರ, ಗಣೇಶ ಹೊರತಟ್ನಾಳ ಇತರರಿದ್ದರು.