ಪ್ರಧಾನಿ ಮೋದಿ ದೇಶದಲ್ಲೆ ಹೆಚ್ಚು ದಿನಗಳ ಪ್ರಧಾನಿಯಾದ ಹಿನ್ನಲೆಯಲ್ಲಿ ಕೊಪ್ಪಳದ ಈಶ್ವರ ದೇವಸ್ಥಾನದಲ್ಲಿ ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಪ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್​ ಗುಳಗಣ್ಣವರ, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್​ ಇದ್ದರು. 
ಕೊಪ್ಪಳ

ದೇಶದಲ್ಲೆ ಹೆಚ್ಚು ದಿನಗಳ ಪ್ರಧಾನಿ ಮೋದಿ

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿಯಿಂದ ವಿಶೇಷ ಪೂಜೆ
ಕೊಪ್ಪಳ : ದೇಶದ ಅತಿ ಹೆಚ್ಚು ದಿನಗಳ ಕಾಲ ಚುನಾಯಿತ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ಒಟ್ಟು 4,399 ದಿನಗಳ ಸೇವೆಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಗರದ ಈಶ್ವರ ದೇವಸ್ಥಾನದಲ್ಲಿ ಬುಧವಾರ ಬಿಜೆಪಿಯಿಂದ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಅಭಿವೃದ್ಧಿಯ ಹೊಸ ಶಿಖರದತ್ತ ಸಾಗುತ್ತಿದೆ ಎಂದು ಅಭಿಪ್ರಾಯಪಟ್ಟ ಮುಖಂಡರು, ದೇಶದ ಪ್ರಗತಿಗೆ ಅವರ ಕೊಡುಗೆಯನ್ನು ಸ್ಮರಿಸಿದರು. ಇದೇ ವೇಳೆ ಮೋದಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಮುಂದಿನ ದಿನಗಳಲ್ಲಿಯೂ ಯಶಸ್ವಿ ನಾಯಕತ್ವ ನೀಡುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ದೇವಸ್ಥಾನದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಹಿರಿಯರು ಪ್ರಧಾನಿ ಮೋದಿಯ ದೇಶಸೇವೆಯನ್ನು ಪ್ರಶಂಸಿಸಿದರು. ದೇಶದ ಅಭಿವೃದ್ಧಿ, ಜನಕಲ್ಯಾಣ ಮತ್ತು ಸುಶಾಸನಕ್ಕಾಗಿ ಕೈಗೊಂಡಿರುವ ವಿವಿಧ ಯೋಜನೆಗಳು ಜನರ ಜೀವನಮಟ್ಟ ಸುಧಾರಣೆಗೆ ನೆರವಾಗಿವೆ ಎಂದು ಅಭಿಪ್ರಾಯಪಟ್ಟರು.
ವಿಪ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್​ ಗುಳಗಣ್ಣವರ, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್​, ಪ್ರಮುಖರಾದ ಮಹಾಂತೇಶ ಮೈನಳ್ಳಿ, ಪ್ರದಿಪ ಹಿಟ್ನಾಳ, ಗವಿ ಗೊರವರ್​, ಶೋಭಾ ನಗರಿ ಇತರರಿದ್ದರು.