ಗಂಗಾವತಿಯಲ್ಲಿ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಶಾಸಕ ಗಾಲಿ ಜನಾರ್ದನರೆಡ್ಡಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ, ಪದಾಧಿಕಾರಿಗಳಾದ ಚಂದ್ರು ನಿಸರ್ಗ, ಜಡಿಯಪ್ಪ ಹಂಚಿನಾಳ, ದುರುಗೇಶ್ ಹೊಸಳ್ಳಿ ಇತರರಿದ್ದರು.
ಗಂಗಾವತಿ: ವಾಹನ ದಟ್ಟಣೆ ನಿಯಂತ್ರಣಕ್ಕೆ ನಗರದ ಹೊರ ವಲಯದಲ್ಲಿ ರಿಂಗ್‌ರೋಡ್ ನಿರ್ಮಾಣ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಸೋಮವಾರ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ, ನಗರದಲ್ಲಿ ಜನ ಮತ್ತು ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ರಿಂಗ್‌ರೋಡ್ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಇಸ್ಪೀಟ್, ಮಟ್ಕಾ ಹಾವಳಿಗೆ ಕ್ರಮ ಕೈಗೊಳ್ಳಬೇಕಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ ಸಂಚಾರದ ವ್ಯವಸ್ಥೆ, ಹಾಸ್ಟೆಲ್ ಮಂಜೂರಾತಿ, ಶಾಲೆಗಳಲ್ಲಿ ಶಿಕ್ಷಕರ ನೇಮಕ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಪದಾಧಿಕಾರಿಗಳಾದ ಚಂದ್ರು ನಿಸರ್ಗ, ಜಡಿಯಪ್ಪ ಹಂಚಿನಾಳ, ದುರುಗೇಶ್ ಹೊಸಳ್ಳಿ, ಬಸವರಾಜ್ ನಾಯಕ, ಅರವಿಂದ್ ಯೋಗಿ, ಮೇಘರಾಜ್ ಇತರರಿದ್ದರು.